ಡಿ.23: ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿ ಚುನಾವಣೆ

0

ಡಿ.11ರಿಂದ ನಾಮಪತ್ರ ಸಲ್ಲಿಕೆ ಆರಂಭ – ಡಿ.17 ನಾಮಪತ್ರ ಹಿಂಪಡೆಯಲು ಕೊನೆಯ ದಿನ

ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಆಡಳಿತ ಮಂಡಳಿಗೆ ಡಿ.23ರಂದು ಕೃಷಿ ಪತ್ತಿನ ಸಹಕಾರಿ ಸಂಘದ ಆವರಣದಲ್ಲಿ ಚುನಾವಣೆ ನಡೆಯಲಿದೆ.

ಸಂಪಾಜೆ ಸಹಕಾರಿ ಸಂಘದಲ್ಲಿ ಸಾಮಾನ್ಯ ಕ್ಷೇತ್ರದಿಂದ 6, ಪರಿಶಿಷ್ಟ ಜಾತಿ ಮೀಸಲು ಸ್ಥಾನದಿಂದ 1, ಪರಿಶಿಷ್ಟ ಪಂಗಡ ಮೀಸಲು ಸ್ಥಾನದಿಂದ 1, ಹಿಂದುಳಿದ ವರ್ಗ ಪ್ರವರ್ಗ ಎ ಮೀಸಲು ಸ್ಥಾನದಿಂದ 1, ಹಿಂದುಳಿದ ವರ್ಗ ಪ್ರವರ್ಗ ಬಿ ಮೀಸಲು ಸ್ಥಾನದಿಂದ1 ಹಾಗೂ ಮಹಿಳಾ ಮೀಸಲು ಸ್ಥಾನ 2 ಸೇರಿದಂತೆ ಒಟ್ಟು 12 ಮಂದಿ ನಿರ್ದೇಶಕರುಗಳ ಆಯ್ಕೆ ನಡೆಯಬೇಕಾಗಿದ್ದು ಒಟ್ಟು 770 ಮಂದಿ ಸದಸ್ಯ ಮತದಾರರಿದ್ದಾರೆ.

ಡಿ.11ರಿಂದ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ ಆರಂಭಗೊಳ್ಳಲಿದ್ದು, ನಾಮಪತ್ರ ಸಲ್ಲಿಕೆಗೆ ಡಿ.15 ಕೊನೆಯ ದಿನವಾಗಿದೆ. ಡಿ.16ರಂದು ಚುನಾವಣಾ ರಿಟರ್ನಿಂಗ್ ಆಫೀಸರ್ ಅವರಿಂದ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಅಭ್ಯರ್ಥಿಗಳು ನಾಮಪತ್ರ ಹಿಂಪಡೆಯಲು ಡಿ‌.17 ಕೊನೆಯ ದಿನವಾಗಿದೆ.
ಡಿ.17ರಂದು ಸಿಂಧುತ್ವ ಹೊಂದಿರುವ ಅಭ್ಯರ್ಥಿಗಳ ಪಟ್ಟಿಯ ಪ್ರಕಟಣೆ ನಡೆಯಲಿದ್ದು, ಅಂದೇ ಅಭ್ಯರ್ಥಿಗಳಿಗೆ ಚಿಹ್ನೆಗಳ ಹಂಚಿಕೆ ಮಾಡಲಾಗುವುದು. ಡಿ.18ರಂದು ಸಿಂಧುತ್ವ ಹೊಂದಿರುವ ಅಭ್ಯರ್ಥಿಗಳ ಪಟ್ಟಿ ಚಿಹ್ನೆಯೊಂದಿಗೆ ಪ್ರಕಟಗೊಳ್ಳಲಿದೆ.

ಡಿ.23ರಂದು ಬೆಳಿಗ್ಗೆ 9ರಿಂದ ಸಂಜೆ 4ರವರೆಗೆ ಸಹಕಾರಿ ಸಂಘದ ಆವರಣದಲ್ಲಿ ಚುನಾವಣೆ ನಡೆಯಲಿದ್ದು, ಚುನಾವಣೆ ಮುಗಿದ ಬಳಿಕ ಸಂಜೆ ಮತ ಎಣಿಕೆ ನಡೆಯಲಿದ್ದು, ಚುನಾವಣಾ ರಿಟರ್ನಿಂಗ್ ಅಧಿಕಾರಿ ಅವರು ಫಲಿತಾಂಶ ಘೋಷಿಸಲಿದ್ದಾರೆ.