ಅಜ್ಜಾವರ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶೈಕ್ಷಣಿಕ ಪ್ರವಾಸವನ್ನು ಡಿ.6ರಂದು ಕೈಗೊಳ್ಳಲಾಯಿತು.
ಪ್ರವಾಸವನ್ನು ಮಂಗಳೂರಿನಿಂದ ಕೇರಳದ ಕಣ್ಣೂರಿಗೆ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನಲ್ಲಿ ಶಾಲೆಯ ಪೋಷಕರು ಮತ್ತು ಮಕ್ಕಳೊಡನೆ ಒಂದು ದಿನದ ಪ್ರವಾಸ ಹಮ್ಮಿಕೊಳ್ಳಲಾಯಿತು. ಕಣ್ಣೂರು ಹಾಗೂ ಸುತ್ತಮುತ್ತಲಿನ ಪ್ರವಾಸಿ ತಾಣಗಳನ್ನು ವೀಕ್ಷಿಸಿ, ಸಾಯಂಕಾಲ ಕಣ್ಣೂರು-ಬೆಂಗಳೂರು ಎಕ್ಸ್ಪ್ರೆಸ್ ರೈಲಿನಲ್ಲಿ ಹಿಂತಿರುಗಲಾಯಿತು.