ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಸಂಪ್ಯಾಡಿ ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆ

0

ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಬಳಪ ಸಮೀಪದ ಸಂಪ್ಯಾಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಎಲ್ಲ ವಿದ್ಯಾರ್ಥಿಗಳಿಗೆ ಸಮವಸ್ತ್ರವನ್ನು ಉಚಿತವಾಗಿ ವಿತರಿಸಲಾಯಿತು.ಸುಬ್ರಹ್ಮಣ್ಯ ರೋಟರಿ ಕ್ಲಬ್‌ನ ಸದಸ್ಯ ಸಮೀರ್ ಬಳ್ಪ ಪ್ರಾಯೋಜಕತ್ವ ವಹಿಸಿದ್ದರು. ಸಮಾರಂಭದ ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ಅಧ್ಯಕ್ಷ ಚಂದ್ರಶೇಖರ ನಾಯರ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ದೇವಿಪ್ರಸಾದ್ ಉಪಸ್ಥಿತರಿದ್ದರು.


ವೇದಿಕೆಯಲ್ಲಿ ರೋಟರಿ ಕ್ಲಬ್ ಪೂರ್ವ ಅಧ್ಯಕ್ಷ ಗೋಪಾಲ ಎಣ್ಣೆಮಜಲ್, ನಿರ್ದೇಶಕ ಸುದರ್ಶನ ಶೆಟ್ಟಿ, ಸಮವಸ್ತ್ರ ಪ್ರಯೋಜಕರಾದ ಸಮೀರ್ ಬಳ್ಪ, ಕಾರ್ಯದರ್ಶಿ ಚಿದಾನಂದ ಕುಳ ,ಶಾಲಾ ಮುಖ್ಯ ಶಿಕ್ಷಕಿ ವೇದಾವತಿ ,ಪೋಷಕವರಿಂದದವರು ಹಾಗೂ ಎಲ್ಲಾ ಮಕ್ಕಳು ಹಾಜರಿದ್ದರು.