ಜ.5ರಂದು ಮಂಡೆಕೋಲು ಶ್ರೀ ಅಯ್ಯಪ್ಪ ಸ್ವಾಮಿ ಮಂದಿರದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆ

0

ಶ್ರೀ ಶಬರಿಗಿರಿ ಸೇವಾ ಪ್ರತಿಷ್ಠಾನ ಇದರ ಆಶ್ರಯದಲ್ಲಿರುವ ಶ್ರೀ ಅಯ್ಯಪ್ಪ ಸ್ವಾಮಿ ಮಂದಿರ ಕಣೆಮರಡ್ಕ, ಮಂಡೆಕೋಲು ಇಲ್ಲಿ 3ನೇ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ಲೋಕಕಲ್ಯಾಣಾರ್ಥವಾಗಿ ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆ ಜ.5ರಂದು ನಡೆಯಲಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷರಾದ ಸುರೇಶ್ ಕಣೆಮರಡ್ಕ ತಿಳಿಸಿದರು. ಇಂದು ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಕಾರ್ಯಕ್ರಮದ ವಿವರ ನೀಡಿದರು.


ಸುಮಾರು 52 ವರ್ಷಗಳ ಹಿಂದೆ ಆರಂಭವಾದ ಭಜನಾ ಮಂದಿರದಲ್ಲಿ ಕಳೆದ ಮೂರು ವರ್ಷಗಳಿಂದ ವಾರ್ಷಿಕ ಪ್ರತಿಷ್ಠಾ ವಾರ್ಷಿಕೋತ್ಸವ ನಡೆದುಕೊಂಡು ಬರುತ್ತಿದ್ದು, ಜ.5ರಂದು ಬೆಳಿಗ್ಗೆ ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ ಗಣಪತಿ ಹವನ, ಗುಳಿಗ ದೈವದ ಕಟ್ಟೆಗೆ ಪೂಜೆ, ತಂಬಿಲ, ಶ್ರೀ ಶನೈಶ್ಚರ ಪೂಜೆ, ಮಧ್ಯಾಹ್ನ ಮಹಾಪೂಜೆ, ಭಜನಾ ಸಂಕೀರ್ತನೆ, ಅನ್ನಸಂತರ್ಪಣೆ ನಡೆಯಲಿದೆ. ಅಪರಾಹ್ನ 2 ಗಂಟೆಗೆ ಧಾರ್ಮಿಕ ಸಭಾ ಕಾರ್ಯಕ್ರಮ ಮತ್ತು ಗುರುವಂದನೆ ಹಾಗೂ ಪ್ರತಿಭಾ ಪುರಸ್ಕಾರ ನಡೆಯಲಿದೆ.

ಉದ್ಘಾಟನೆಯನ್ನು ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ನೆರವೇರಿಸಲಿದ್ದು, ಧಾರ್ಮಿಕ ಉಪನ್ಯಾಸವನ್ನು ಖ್ಯಾತ ವಾಗ್ಮಿಗಳಾದ ದಯಾನಂದ ಕತ್ತಲ್ ಸರ್ ನೀಡಲಿದ್ದಾರೆ.ಶಾಸಕಿ ಕು.ಭಾಗೀರಥಿ ಮುರುಳ್ಯ ಸಹಿತ ಹಲವಾರು ಗಣ್ಯರು ಭಾಗವಹಿಸಿದ್ದಾರೆ ಎಂದು ಅವರು ಹೇಳಿದರು.
ಸಾಯಂಕಾಲ ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ನಡೆಯಲಿರುವುದಾಗಿ ತಿಳಿಸಿದರು.


ಪತ್ರಿಕಾಗೋಷ್ಠಿಯಲ್ಲಿ ಉಪಾಧ್ಯಕ್ಷ ಶಿವಪ್ರಸಾದ್ ಉಗ್ರಾಣಿಮನೆ, ಪದಾಧಿಕಾರಿಗಳಾದ ಪ್ರಕಾಶ್, ಅನಿಲ್ ತೋಟಪ್ಪಾಡಿ, ಪ್ರೀತೇಶ್, ಸಂತೋಷ್, ಪ್ರವೀಣ್ ಮುಳ್ಯ ಉಪಸ್ಥಿತರಿದ್ದರು.