ವಿದ್ಯಾರ್ಥಿಗಳಿಗೆ ಗುರಿ, ಕಠಿಣ ಪರಿಶ್ರಮ, ನಿರಂತರ ಅಧ್ಯಯನದ ಜೊತೆಗೆ ಜ್ಞಾನ ಸಂಪಾದನೆ ಬಹಳ ಮುಖ್ಯ. ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಒತ್ತು ನೀಡುತ್ತಿರುವ ಈ ಕಾಲೇಜು ನನ್ನ ಬದುಕಿನ ಉನ್ನತಿಗೆ ಕಾರಣವಾಗಿದೆ ಎಂದು ಸಂಸ್ಥೆಯ ಹಿರಿಯ ವಿದ್ಯಾರ್ಥಿನಿ ಸಿ.ಎ.ಮಮತಾ ಪಿ.ಡಿ ನುಡಿದರು . ಅವರು ಸುಳ್ಯದ ನೆಹರು ಮೆಮೋರಿಯಲ್ ಪಪೂ ಕಾಲೇಜಿನಲ್ಲಿ ವಾರ್ಷಿಕೋತ್ಸವದ ಅಂಗವಾಗಿ ನಡೆದ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡುತ್ತಿದ್ದರು.
ಸಭಾಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಕಾಲೇಜಿನ ಪ್ರಾoಶುಪಾಲೆ ಮಿಥಾಲಿ ಪಿ ರೈ ಅವರು ಮಾತನಾಡಿ ಜ್ಞಾನ ಸಂಪಾದನೆ ಮಾಡುವಲ್ಲಿ ವಿದ್ಯಾರ್ಥಿಗಳು ಗಮನ ನೀಡಬೇಕು. ಸಾಧನೆಯ ಮೂಲಕ ಯಶಸ್ವಿ ವ್ಯಕ್ತಿಗಳಾಗಲು ಸಾಧ್ಯ ಎಂದರು. ಗೌರವ ಉಪಸ್ಥಿತರಿದ್ದ ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ ಪೇರಾಲು,ಪದವಿ ವಿಭಾಗದ ಪ್ರಾಚಾರ್ಯರಾದ ಡಾ ರುದ್ರ ಕುಮಾರ್ ಎಂ ಎಂ ಅವರು ಶುಭ ಹಾರೈಸಿದರು.
ವೇದಿಕೆಯಲ್ಲಿ ವಿದ್ಯಾರ್ಥಿ ಕ್ಷೇಮಾಧಿಕಾರಿ ವಿನಯ್ ನಿಡ್ಯಮಲೆ ಉಪಸ್ಥಿರಿದ್ದರು. ವಿದ್ಯಾರ್ಥಿನಿ ಅಮೃತ ಮತ್ತು ತಂಡದವರು ಪ್ರಾರ್ಥಿಸಿದರು.ವಾಣಿಜ್ಯ ಶಾಸ್ತ್ರ ಉಪನ್ಯಾಸಕಿ ಸಾವಿತ್ರಿ ಕೆ ಸ್ವಾಗತಿಸಿ, ಕನ್ನಡ ಉಪನ್ಯಾಸಕಿ ಬೇಬಿ ವಿದ್ಯಾ ಪಿ ಬಿ ಮುಖ್ಯ ಅತಿಥಿಗಳನ್ನು ಪರಿಚಯಿಸಿದರು.
ವಿದ್ಯಾರ್ಥಿ ನಾಯಕ ಸುಶಾಂತ್ ವಂದಿಸಿದರು. ಉಪನ್ಯಾಸಕರಾದ ಹರ್ಷಿತ ಎ.ಬಿ, ವಿನುತ ಕೆ ಎನ್,ವಿನಯ್ ನಿಡ್ಯಮಲೆ,ಉಮಾಶ್ರೀ ಪ್ರಭು, ರಾಧಿಕಾ ಬಹುಮಾನ ಪಟ್ಟಿ ವಾಚಿಸಿದರು.ವಿದ್ಯಾರ್ಥಿಗಳಾದ ಭೂಮಿಕಾ ಬಿ ಪಿ,ಆಯಿಷತ್ ಅಸ್ನ ನಿರೂಪಿಸಿದರು.