ಕೆ.ವಿ.ಜಿ. ದಂತ ಮಹಾವಿದ್ಯಾಲದ ವಾರ್ಷಿಕ ಕ್ರೀಡಾಕೂಟವು ಡಿ.12ರಂದು ಕೆ.ವಿ.ಜಿ. ಕ್ರೀಡಾಂಗಣದಲ್ಲಿ ನಡೆಯಿತು.
ಜಯಪ್ರಕಾಶ್‌ಕುಂಚಡ್ಕ, ಮಾಜಿಅಧ್ಯಕ್ಷರು, ತಾಲೂಕು ಪಂಚಾಯತ್ ಸುಳ್ಯ, ದೀಪ ಬೆಳಗಿಸುವ ಮೂಲಕ ಕ್ರೀಡಾಕೂಟವನ್ನುಉದ್ಘಾಟಿಸಿ ಕ್ರೀಡಾಕೂಟಕ್ಕೆ ಶುಭ ಹಾರೈಸಿದರು. ಕಾಲೇಜಿನ ಮುಖ್ಯಕಾರ್ಯನಿರ್ವಹಣಾಧಿಕಾರಿಡಾ. ಉಜ್ವಲ್‌ಯು.ಜೆ. ಯವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಶುಭಹಾರೈಸಿ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಿದರು.
ಕೆ.ವಿ.ಜಿ. ದಂತ ಮಹಾವಿದ್ಯಾಲಯದ ಪ್ರಾಂಶುಪಾಲೆ ಡಾ| ಮೋಕ್ಷಾ ನಾಯಕ್‌ರವರು ಕ್ರೀಡಾಕೂಟಕ್ಕೆ ಶುಭ ಹಾರೈಸಿದರು. ಡಾ|| ಭೂಮಿಕಾ ಯಸ್. ಎಲ್ಲರನ್ನೂ ಸ್ವಾಗತಿಸಿದರು. ಮುಖ್ಯ ಅತಿಥಿಗಳನ್ನು ವಿದ್ಯಾರ್ಥಿ ಪ್ರಭು ಪರಿಚಯಿಸಿದರು.
ಮುಖ್ಯ ಅತಿಥಿಗಳಾದ ಜಯಪ್ರಕಾಶ್ ಕುಂಚಡ್ಕಅವರನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು. ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್‌ಯು.ಜೆ. ದೈಹಿಕ ಶಿಕ್ಷಣ ನಿರ್ದೇಶಕರುಗಳಿಗೆ ಸ್ಮರಣಿಕೆ ನೀಡಿದರು.
ಕಾರ್ಯಕ್ರಮದಲ್ಲಿ ಕೆ.ವಿ.ಜಿ. ದಂತಮಹಾವಿದ್ಯಾಲಯದ ಎಲ್ಲಾ ವಿಭಾಗ ಮುಖ್ಯಸ್ಥರುಗಳು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಭಾಗವಹಿಸಿದರು.
ಸುಹಾನಾ ಫಾತಿಮಾ ವಂದಾನಾರ್ಪಣೆಗೈದರು. ಡಾ. ಜೆರ್ಲಿನ ಕಾರ್ಯಕ್ರಮ ನಿರೂಪಿಸಿದರು. ಡಾ|| ರೇವಂತ್ ಸೂಂತೋಡು, ಡಾ|| ಮನೋಜ್‌ಕುಮಾರ್‌ಎ.ಡಿ. ಹಾಗೂ ಡಾ|| ಅಲ್ವಿನ್‌ರವರು ನೇತೃತ್ವ ವಹಿಸಿದ್ದರು. ಇವರಿಗೆಕೆ.ವಿ.ಜಿ. ದಂತ ಮಹಾವಿದ್ಯಾಲಯದ ಆಡಳಿತಾಧಿಕಾರಿ ಮಾಧವ ಬಿ.ಟಿ. ಸಹಕರಿಸಿದರು.
.