ನೂತನ ಆಡಳಿತ ಮಂಡಳಿಗೆ ನಿರ್ದೇಶಕರುಗಳ ಆಯ್ಕೆಗೆ ಚುನಾವಣೆ ಹಿನ್ನೆಲೆ
ಜಿ.ಕೆ. ಹಮೀದ್ ಹಾಗೂ ಶ್ರೀಮತಿ ಸುಮತಿ ಶಕ್ತಿವೇಲು ನಾಮಪತ್ರ ಸಲ್ಲಿಕೆ
ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಆಡಳಿತ ಮಂಡಳಿಗೆ ನಿರ್ದೇಶಕರುಗಳ ಆಯ್ಕೆಗೆ ಡಿ.23ರಂದು ಚುನಾವಣೆ ನಡೆಯಲಿದ್ದು, ಸಾಮಾನ್ಯ ಕ್ಷೇತ್ರದಿಂದ ಜಿ.ಕೆ. ಶಾಹುಲ್ ಹಮೀದ್ , ಮಹಿಳಾ ಕ್ಷೇತ್ರದಿಂದ ಶ್ರೀಮತಿ ಸುಮತಿ ಶಕ್ತಿವೇಲು ಹಾಗೂ ಸಾಮಾನ್ಯ ಕ್ಷೇತ್ರದಿಂದ ಅಬ್ದುಲ್ ಹನೀಫ್ ಎ.ಕೆ. ಅವರು ಡಿ.12ರಂದು ಚುನಾವಣಾ ಅಧಿಕಾರಿಗಳಿಗೆ ತಮ್ಮ ನಾಮಪತ್ರಗಳನ್ನು ಸಲ್ಲಿಕೆ ಮಾಡಿದರು.