ಕೆವಿಜಿ ಅಮರಜ್ಯೋತಿ ಕಾಲೇಜಿನ ಸಿ.ಎ ವಿದ್ಯಾರ್ಥಿಗಳ ಸಾಧನೆ

0

ಡಿ. 7ರಂದು ನಡೆದ ಅಲಿಯಾನ್ಸ್ ಯೂನಿವರ್ಸಿಟಿ ಆಯೋಜಿಸಿದ್ದ ಪ್ಯಾನ್ ಇಂಡಿಯಾ ಆನ್ ಲೈನ್ ಕ್ವಿಜ್ ನಲ್ಲಿ ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನ ಗಗನ್ ದೀಪ್, ಫಾತಿಮಾತ್ ಅಫ್ರ, ನಹೀಮ ತಸ್ನೀಮ್ ಸೆಮಿಫೈನಲ್ ಹಂತಕ್ಕೆ ತೇರ್ಗಡೆಯಾಗಿರುತ್ತಾರೆ.ಇವರಿಗೆ ಉಪನ್ಯಾಸಕರಾದ ದೀಕ್ಷಿತ್ ಎಂ.ಕೆಯವರು ಮಾರ್ಗದರ್ಶನ ನೀಡುತ್ತಿದ್ದಾರೆ. ಆಯ್ಕೆಯಾದ ವಿದ್ಯಾರ್ಥಿಗಳು ಡಿಸೆಂಬರ್ 16 ರಂದು ಬೆಂಗಳೂರಿನಲ್ಲಿ ನಡೆಯುವ ಸೆಮಿಫೈನಲ್ ನಲ್ಲಿ ಭಾಗವಹಿಸಲಿದ್ದಾರೆ. ವಿದ್ಯಾರ್ಥಿಗಳಿಗೆ ಕಾಲೇಜಿನ ಮ್ಯಾನೇಜಿಂಗ್ ಟ್ರಸ್ಟಿ ಡಾ. ರೇಣುಕಾ ಪ್ರಸಾದ್ ಕೆ ವಿ,ಟ್ರಸ್ಟಿ ಡಾ. ಜ್ಯೋತಿ ಆರ್ ಪ್ರಸಾದ್, ಕಾಲೇಜಿನ ಸಿಇಒ ಡಾ. ಉಜ್ವಲ್ ಯು.ಜೆ, ಕಾಲೇಜಿನ ಪ್ರಾಂಶುಪಾಲರಾದ ಡಾ. ಯಶೋದಾ ರಾಮಚಂದ್ರ, ಉಪ ಪ್ರಾಂಶುಪಾಲರಾದ ದೀಪಕ್ ವೈ.ಆರ್ ಶುಭ ಹಾರೈಸಿದರು.