ಸಾಲಗಾರರಲ್ಲದ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸತ್ಯಶಾಂತಿ ತ್ಯಾಗಮೂರ್ತಿ ನಾಮಪತ್ರ ಸಲ್ಲಿಕೆ
ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿ. ಜಾಲ್ಸೂರು ಇದರ ನೂತನ ಆಡಳಿತ ಮಂಡಳಿಗೆ ನಿರ್ದೇಶಕರುಗಳ ಆಯ್ಕೆಗೆ ಚುನಾವಣೆ ನಡೆಯಲಿದ್ದು, ಸಾಲಗಾರರಲ್ಲದ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸಾಮಾಜಿಕ ಹೋರಾಟಗಾರ ಸೋಣಂಗೇರಿಯ ಸತ್ಯಶಾಂತಿ ತ್ಯಾಗಮೂರ್ತಿ ಅವರು ಚುನಾವಣಾ ಅಧಿಕಾರಿಗಳಿಗೆ ತಮ್ಮ ನಾಮಪತ್ರ ಸಲ್ಲಿಸಿದರು. ಕೃಷ್ಣಪ್ಪ ಮಹಾಬಲಡ್ಕ ಅವರು ಜೊತೆಗಿದ್ದರು.