ಮುರುಳ್ಯ ಗ್ರಾಮದ ಪೂದೆ ಶ್ರೀ ಗಣಪತಿ ಮಲ್ಲಿಕಾರ್ಜುನ ಮತ್ತು ಮಹಾವಿಷ್ಣು ದೇವಸ್ಥಾನಕ್ಕೆ ರಾಜ್ಯ ಧಾರ್ಮಿಕ ಪರಿಷತ್ತಿನ ಸದಸ್ಯೆ ಮಲ್ಲಿಕಾ ಪಕ್ಕಳ ಇತ್ತೀಚೆಗೆ ಭೇಟಿ ನೀಡಿ ಕಾಮಗಾರಿಯನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಗುತ್ತಿಗೆದಾರರಿಗೆ ದೂರವಾಣಿ ಮೂಲಕ ಸಂಪರ್ಕಿಸಿ ಕಾಮಗಾರಿಯನ್ನು ಆದಷ್ಟು ಬೇಗ ಸಂಪೂರ್ಣಗೊಳಿಸಲು ಆದೇಶಿಸಿದರು. ಈ ಸಂದರ್ಭದಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಇಂಜಿನಿಯರ್ ಉದಯಕುಮಾರ್, ಮಾಸ್ಟರ್ ಪ್ಲಾನರಿ ಮೇಲುಸ್ತುವಾರಿ ಸಮಿತಿ ಸದಸ್ಯ ಸತೀಶ್ ಕೂಜುಗೋಡು, ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಭುವನೇಶ್ವರ ಪೂದೆ, ಶಿಲ್ಪಿ ದಿವಾಕರ್ ಉಪಸ್ಥಿತರಿದ್ದರು.