ಅಡ್ಕಾರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಧನುಪೂಜೆ

0

ನೂರಾರು ಸಂಖ್ಯೆಯಲ್ಲಿ ಆಗಮಿಸಿದ ಭಕ್ತಾದಿಗಳು

ಜಾಲ್ಸೂರು ಗ್ರಾಮದ ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಧನುಪೂಜೆಯು ದೇವಸ್ಥಾನದ ಪ್ರಧಾನ ಅರ್ಚಕ ಶ್ರೀವರ ಪಾಂಗಣ್ಣಾಯರ ನೇತೃತ್ವದಲ್ಲಿ ಡಿ .16ರಂದು ಬೆಳಗ್ಗಿನ ಜಾವ ನಡೆಯಿತು.

ನೂರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಉಪಸ್ಥಿತರಿದ್ದು, ಪೂಜಾ ಸೇವೆ ಮಾಡಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಮೊಕ್ತೇಸರ ಗುರುರಾಜ್ ಭಟ್ ಅಡ್ಕಾರು, ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು, ಮಾಜಿ ವ್ಯವಸ್ಥಾಪನ ಸಮಿತಿಯ ಪದಾಧಿಕಾರಿಗಳು, ವಿವಿಧ ಬೈಲುವಾರು ಸಮಿತಿಯ ಪದಾಧಿಕಾರಿಗಳು ಸೇರಿದಂತೆ ಭಕ್ತಾದಿಗಳು ಉಪಸ್ಥಿತರಿದ್ದರು. ಧನುಪೂಜೆಯು ಜ.14ರ ತನಕ ಪ್ರತಿದಿನ ಬೆಳಿಗ್ಗೆ 5 ಗಂಟೆಗೆ ಜರುಗಲಿದೆ.