ಸುಳ್ಯ ತಾಲೂಕು ಪಿಂಚಣಿದಾರರ ಮತ್ತು ನಿವೃತ್ತ ನೌಕರರ ಸಂಘ ಸುಳ್ಯ ತಾಲೂಕು ಇದರ ವತಿಯಿಂದ ಪಿಂಚಣಿದಾರರ ದಿನಾಚರಣೆ ಮತ್ತು ಹಿರಿಯ ಸದಸ್ಯರುಗಳಿಗೆ ಸನ್ಮಾನ ಕಾರ್ಯಕ್ರಮ ಇಂದು ಸಂಧ್ಯಾರಶ್ಮಿ ಯಲ್ಲಿ ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಡಾ.ಎಸ್.ರಂಗಯ್ಯ ವಹಿಸಿದ್ದರು. ನಿವೃತ್ತ ಸೇನಾಧಿಕಾರಿ ಕರ್ನಲ್ ನಿಟ್ಟೆಗುತ್ತು ಶರತ್ ಭಂಡಾರಿ ಮುಖ್ಯ ಅತಿಥಿಯಾಗಿದ್ದರು.
ಈ ಸಂದರ್ಭದಲ್ಲಿ ಸುಮಾರು 30ಮಂದಿ ಹಿರಿಯ ಸದಸ್ಯರುಗಳಿಗೆ ಸನ್ಮಾನ ಮಾಡಲಾಯಿತು.
ವೇದಿಕೆಯಲ್ಲಿ ಸಂಘದ ಗೌರವಾಧ್ಯಕ್ಷ ಬಾಬು ಗೌಡ ಎ., ಕಾರ್ಯದರ್ಶಿ ಪ್ರೊ.ಕೆ.ವಿ.ದಾಮೋದರ ಗೌಡ, ಉಪಾಧ್ಯಕ್ಷರಾದ ರಾಮಚಂದ್ರ ಪಳಂಗಾಯ, ಪ್ರೇಮಲತಾ ಎ.ಎಚ್.,ಕೋಶಾಧಿಕಾರಿ ಯಂ.ಸುಬ್ರಹ್ಮಣ್ಯ ಹೊಳ್ಳ ಉಪಸ್ಥಿತರಿದ್ದರು.
ನಿವೃತ್ತ ಶಿಕ್ಷಕ ಎ.ಅಬ್ದುಲ್ಲ ಅರಂತೋಡು ಕಾರ್ಯಕ್ರಮ ನಿರೂಪಿಸಿದರು.