ಡಾ. ಕೆ.ವಿ ಚಿದಾನಂದ ಮತ್ತು ಮನೆಯವರು ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಶ್ರೀಚೆನ್ನಕೇಶವ ದೇವಸ್ಥಾನದ ಬ್ರಹ್ಮರಥ ಸಮರ್ಪಣಾ ಕಾರ್ಯಕ್ರಮದ ಆಮಂತ್ರಣ ಪತ್ರವನ್ನು ನೀಡಿ ಕಾರ್ಯಕ್ರಮಕ್ಕೆ ಆಹ್ವಾನಿಸಿ ಆಶೀರ್ವಾದ ಪಡೆದುಕೊಂಡರು.
ಸುಳ್ಯದ ಇತಿಹಾಸ ಪ್ರಸಿದ್ಧ ದೇವಸ್ಥಾನವಾಗಿರುವ ಶ್ರೀ ಚೆನ್ನಕೇಶವ ದೇವಸ್ಥಾನಕ್ಕೆ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ) ಸುಳ್ಯ ಇದರ ಅಧ್ಯಕ್ಷ ಹಾಗೂ ಶ್ರೀ ಚೆನ್ನಕೇಶವ ದೇವಸ್ಥಾನದ ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ ಮತ್ತು ಮನೆಯವರು ನೂತನ ಬ್ರಹ್ಮರಥ ಮತ್ತು ಪಲ್ಲಕ್ಕಿಯನ್ನು ಸಮರ್ಪಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಅವರಿಗೆ ಡಿ. 18ರಂದು ಆಮಂತ್ರಣ ಪತ್ರಿಕೆಯನ್ನು ನೀಡಿದರು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ) ಸುಳ್ಯ ಇದರ ಅಧ್ಯಕ್ಷರಾಗಿರುವ ಡಾ. ಕೆ.ವಿ. ಚಿದಾನಂದ, ಎಒಎಲ್ಇ ಉಪಾಧ್ಯಕ್ಷೆ ಶ್ರೀಮತಿ ಶೋಭಾ ಚಿದಾನಂದ, ಎಒಎಲ್ಇ ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ.ಸಿ, ಚೆನ್ನಕೇಶವ ದೇವಳದ ಅನುವಂಶಿಕ ಆಡಳಿತ ಮೊಕ್ತೇಸರ ಡಾ. ಹರಪ್ರಸಾದ್ ತುದಿಯಡ್ಕ ಸೇರಿದಂತೆ ಗಣ್ಯರು ಹಾಜರಿದ್ದರು. ಡಿ.25ರಂದು ಬ್ರಹ್ಮರಥ ಸುಳ್ಯಕ್ಕೆ ಆಗಮಿಸಲಿದೆ.