ಸಂತೋಷ್ ಕುತ್ತಮೊಟ್ಟೆ ನೇತೃತ್ವದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ
ಅರಂತೋಡು – ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಆಡಳಿತ ಮಂಡಳಿಗೆ ನಿರ್ದೇಶಕರುಗಳ ಆಯ್ಕೆಗೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡ ಸಂತೋಷ್ ಕುತ್ತಮೊಟ್ಟೆ ಅವರ ನೇತೃತ್ವದಲ್ಲಿ ಬಿಜೆಪಿ ಬೆಂಬಲಿತ 15 ಮಂದಿ ಅಭ್ಯರ್ಥಿಗಳು ತಮ್ಮ ನಾಮಪತ್ರವನ್ನು ಸಲ್ಲಿಸಿದರು.
ಕಳೆದ ಅವಧಿಯಲ್ಲಿ ಅರಂತೋಡು – ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ಬಿಜೆಪಿ ಬೆಂಬಲಿತ ಅಡಳಿತದಲ್ಲಿತ್ತು .