ಅರಂತೋಡು – ತೊಡಿಕಾನ ಪ್ರಾ.ಕೃ.ಪ‌. ಸ.ಸಂಘದ ಆಡಳಿತ ಮಂಡಳಿ ಚುನಾವಣೆ

0

ಕಾಂಗ್ರೆಸ್ ಬೆಂಬಲಿತ ಆರು ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಅರಂತೋಡು – ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಬೆಂಬಲಿತ ಆರು ಮಂದಿ ಅಭ್ಯರ್ಥಿಗಳು ಡಿ.19ರಂದು ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು.

ಸಾಲಗಾರ ಸಾಮಾನ್ಯ ಕ್ಷೇತ್ರದಿಂದ ಜನಾರ್ದನ ಅಡ್ಕಬಳೆ, ಅಶ್ರಫ್ ಗುಂಡಿ, ಸಂತೋಷ್ ಕೆ. ಹೆಚ್., ಮಹಮ್ಮದ್ ಆಮೀರ್, ಹಿಂದುಳಿದ ವರ್ಗಗಳ ಪ್ರವರ್ಗ ಎ ಮೀಸಲು ಕ್ಷೇತ್ರದಿಂದ ರವೀಂದ್ರ ಜಿ., ಸಾಮಾನ್ಯ ಮಹಿಳಾ ಮೀಸಲು ಕ್ಷೇತ್ರದಿಂದ ವನಿತ ಎಂ.ಟಿ. ಅವರು ನಾಮಪತ್ರಗಳನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.