ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಡಾ.ರೇಣುಕಾಪ್ರಸಾದ್ ಕೆ.ವಿ.ಯವರಿಗೆ ಇಙಟಕ್ ವತಿಯಿಂದ ಗೌರವ

0

ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾಗಿ ಆಯ್ಕೆಯಾದ ಡಾ. ರೇಣುಕಾಪ್ರಸಾದ್ ಕೆ.ವಿ.ಯವರನ್ನು ಇಂಟಕ್ ವತಿಯಿಂದ ಗೌರವಿಸಲಾಯಿತು.

ಸುಳ್ಯದ ಅಮರಶ್ರೀಭಾಗ್ ನ ಜಾನಕಿ ವೆಂಕಟ್ರಮಣ ಸಭಾಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಇಂಟಕ್ ಸುಳ್ಯ ವಿಧಾನ ಸಭಾ‌ಕ್ಷೇತ್ರಾಧ್ಯಕ್ಷ ಶಾಫಿ ಕುತ್ತಮೊಟ್ಟೆ ಗೌರವಿಸಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪಿ.ಎಸ್.ಗಂಗಾಧರ್, ನ.ಪಂ. ಸದಸ್ಯ ರಾಜು ಪಂಡಿತ್, ಎಂ.ಜೆ.ಶಶಿಧರ್, ಭಾಗೀಶ್ ಕೆ‌.ಟಿ. ಮೊದಲಾದವರಿದ್ದರು