ಪೋಷಕರು, ಶಿಕ್ಷಕರ ಮಾರ್ಗದರ್ಶನದಂತೆ ಮುನ್ನಡೆದರೆ ಯಶಸ್ಸನ್ನು ಪಡೆಯಲು ಸಾಧ್ಯ – ಸುಮನ್ ಎನ್. ಮಾಧವ
ವಿದ್ಯಾರ್ಥಿಗಳು ನಿರ್ದಿಷ್ಟ ಗುರಿಯನ್ನಿಟ್ಟುಕೊಂಡು ಶ್ರಮವಹಿಸಿದರೆ ನಿಮ್ಮ ಕನಸು ನನಸಾಗುವುದು. ಪೋಷಕರು ಮತ್ತು ಶಿಕ್ಷಕರ ಮಾರ್ಗದರ್ಶನದಂತೆ ಮುನ್ನಡೆದರೆ ಯಶಸ್ಸನ್ನು ಪಡೆಯಲು ಸಾಧ್ಯ ಎಂದು ಸರೋಜ ಗ್ಲೋಬಲ್ ಸರ್ವಿಸಸ್ ಮ್ಯಾನೇಜಿಂಗ್ ಡೈರೆಕ್ಟರ್ ಸುಮನ ಎನ್. ಮಾಧವ ಹೇಳಿದರು.
ಅವರು ಡಿ. 19 ಸುಳ್ಯದ ಜಾನಕಿ ವೆಂಕಟ್ರಮಣ ಗೌಡ ಸಭಾಭವನ ಅಮರಜ್ಯೋತಿಯಲ್ಲಿ ನಡೆದ ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ನ ವಾರ್ಷಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಎ.ಒ.ಎಲ್.ಇ. ಕಮಿಟಿ ಬಿ ಅಧ್ಯಕ್ಷ ಡಾ. ರೇಣುಕಾಪ್ರಸಾದ್ ಕೆ.ವಿಯವರು ನಮ್ಮ ವಿದ್ಯಾಸಂಸ್ಥೆಗಳು ಉತ್ತುಂಗಕ್ಕೆ ಏರಲು ಕಾರಣೀಕರ್ತರಾದವರು ನಮ್ಮ ಸಂಸ್ಥೆಯ ಆಡಳಿತ ಮಂಡಳಿ ಕಾರ್ಯದರ್ಶಿ ಡಾ. ಜ್ಯೋತಿ ಆರ್. ಪ್ರಸಾದ್, ನಿರ್ದೇಶಕ ಮೌರ್ಯ ಆರ್. ಪ್ರಸಾದ್, ನಮ್ಮ ಸಂಸೆಗಳ ಸಿಇಒ ಡಾ. ಉಜ್ವಲ್ ಯುಜೆಯವರು. ಅವರೊಂದಿಗೆ ಸಹಕಾರ ನೀಡಿದವರು ನಮ್ಮ ಎಲ್ಲಾ ಸಂಸ್ಥೆಗಳ ಸಿಬ್ಬಂದಿಗಳು. ಒಕ್ಕಲಿಗರ ಸಂಘದ ಉಪಾಧ್ಯಕ್ಷನಾಗಿ ಮುಂದಿನ ದಿನಗಳಲ್ಲಿ ಕುರುಂಜಿಗುಡ್ಡೆಯಲ್ಲಿ ವಿದ್ಯಾರ್ಥಿ ನಿಲಯ, ವಿದ್ಯಾರ್ಥಿನಿ ನಿಲಯ ಮತ್ತು ಸಮುದಾಯಭವನವನ್ನು ನಿರ್ಮಾಣ ಮಾಡಲಿದ್ದೇವೆ. ನಾನು ಇವತ್ತು ಎರಡನೇ ಬಾರಿಗೆ ಉಪಾಧ್ಯಕ್ಷನಾಗಿ ಆಯ್ಕೆಯಾಗಬೇಕಾದರೆ ಚುನಾವಣಾ ಸಂದರ್ಭದಲ್ಲಿ ನೀವೆಲ್ಲಾ ಮಾಡಿದ ಸಹಕಾರ ಕಾರಣ. ಅದನ್ನು ಎಂದಿಗೂ ನೆನಪಲ್ಲಿಟ್ಟುಕೊಳ್ಳುತ್ತೇನೆ ಎಂದರು.
ಅತಿಥಿಯಾಗಿ ಎಸ್.ಎಲ್.ವಿ ಬುಕ್ಸ್ ಇಂಡಿಯಾ ಪ್ರೈ.ಲಿ.ನ ವ್ಯವಸ್ಥಾಪಕ ನಿರ್ದೇಶಕರಾದ ದಿವಾಕರ ದಾಸ್ ಭಾಗವಹಿಸಿದ್ದರು.
ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳ ಭವಿಷ್ಯ ರೂಪಿಸುತ್ತವೆ ಡಾ. ಉಜ್ವಲ್ ಯು.ಜೆ
ಡಾ. ರೇಣುಕಾಪ್ರಸಾದ್ ಕೆ.ವಿ ಯವರ ನೇತೃತ್ವದಲ್ಲಿ ಅತ್ಯಾಧುನಿಕ ಗುಣಮಟ್ಟದ ಶಿಕ್ಷಣವನ್ನು ನೀಡಲಾಗುತ್ತಿದೆ. ಪ್ರೌಢಶಾಲಾ ಹಂತದಲ್ಲೇ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವುದು ಹೇಗೆಂಬ ಮಾಹಿತಿ ಕಾರ್ಯಗಾರವನ್ನು ಹಮ್ಮಿಕೊಂಡಿರುವುದು ವಿದ್ಯಾರ್ಥಿಗಳಿಗೆ ಭವಿಷ್ಯದಲ್ಲಿ ಅನುಕೂಲವಾಗಲಿದೆ ಎಂದು ವೇದಿಕೆಯಲ್ಲಿ ಉಪಸ್ಥಿತರಿದ್ದ ಕೆ.ವಿ.ಜಿ.ಐ.ಪಿ.ಎಸ್.ನ ಸಿಇಒ ಡಾ. ಉಜ್ವಲ್ ಯು.ಜೆ ಹೇಳಿದರು. ಎ.ಒ.ಎಲ್.ಇ. ಕಮಿಟಿ ಬಿ ಕಾರ್ಯದರ್ಶಿ ಡಾ. ಜ್ಯೋತಿ ಆರ್. ಪ್ರಸಾದ್ ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಿದರು. ನಿರ್ದೇಶಕರಾದ ಮೌರ್ಯ ಆರ್. ಪ್ರಸಾದ್ ಶಾಲಾ ಕ್ಯಾಲೆಂಡರ್ ಬಿಡುಗಡೆ ಮಾಡಿದರು. ಆಡಳಿತ ಸಮಿತಿ ಸದಸ್ಯರುಗಳಾದ ಮೋಹನ್ ರಾಂ ಸುಳ್ಳಿ ಪಿ.ಎಸ್. ಗಂಗಾಧರ್ ಮತ್ತು ಸಂತೋಷ್ ಕುತ್ತಮೊಟ್ಟೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾಗಿ ಚುನಾಯಿತರಾದ ಎ.ಒ.ಎಲ್.ಇ ಕಮಿಟಿ ಬಿ ಅಧ್ಯಕ್ಷ ಡಾ. ರೇಣುಕಾಪ್ರಸಾದ್ ಕೆ.ವಿಯವರನ್ನು ಹಾಗೂ ಡಾ. ಜ್ಯೋತಿ ಆರ್. ಪ್ರಸಾದ್ ಮತ್ತು ಮೌರ್ಯ ಆರ್ ಕುರುಂಜಿಯರವರನ್ನು ಈ ಸಂದರ್ಭದಲ್ಲಿ ಸಂಸ್ಥೆ ವತಿಯಿಂದ ಮತ್ತು ಎ.ಒ.ಎಲ್.ಇ. ಬಿ ಕಮಿಟಿಯ ಎಲ್ಲಾ ಶಿಕ್ಷಣ ಸಂಸ್ಥೆಗಳ ವತಿಯಿಂದ ಸಂಸ್ಥೆಯ ಪ್ರಾಂಶುಪಾಲರು, ಆಡಳಿತಾಧಿಕಾರಿಗಳು, ಸಿಬ್ಬಂದಿಗಳು ಹಾಗೂ ಡಾ. ರೇಣುಕಾಪ್ರಸಾದ್ ರವರ ಅಭಿಮಾನಿಗಳು ಸನ್ಮಾನಿಸಿದರು. ಶಿಕ್ಷಕಿ ಶ್ರೀಮತಿ ಭವ್ಯ ಅಟ್ಲೂರು ಸನ್ಮಾನ ಪತ್ರ ವಾಚಿಸಿದರು. ವೇದಿಕೆಯಲ್ಲಿ ಉಪಸ್ಥಿತರಿದ್ದ ಕಾಲೇಜಿನ ಪ್ರಾಂಶುಪಾಲರಾದ ಅರುಣ್ ಕುಮಾರ್ ಶಾಲಾ ವರದಿ ವಾಚಿಸಿದರು. ಸಂಸ್ಥೆಯ ಉಪ ಪ್ರಾಂಶುಪಾಲರಾದ ಶಿಲ್ಪ ಬಿದ್ದಪ್ಪ, ವಿದ್ಯಾರ್ಥಿಗಳಾದ ವಿಜ್ಞ್ಯಾ, ಅದ್ವೈತ್ ಕೆ.ಪಿ, ಉತ್ಸವ್ ಮತ್ತು ರೀಮಾ ವಿವಿಧ ಕ್ರೀಡಾ ಸ್ಪರ್ಧೆಗಳು ಮತ್ತು ಶೈಕ್ಷಣಿಕ ಚಟುವಟಿಕೆಗಳಲ್ಲಿ ಸಾಧನೆ ಮಾಡಿ ವಿದ್ಯಾರ್ಥಿಗಳ ಹೆಸರು ವಾಚಿಸಿದರು. ಕು. ಧನ್ವಿ ಮತ್ತು ಕು. ಸ್ಕಂದದಿಯಾ ಕಲ್ಲಾಜೆ ಅತಿಥಿಗಳನ್ನು ಪರಿಚಯಿಸಿದರು. ಕೃಷ್ಣರಾಜ್ ಕೇರ್ಪಳ ಮತ್ತು ಸಂಸ್ಥೆಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ನಾಡಗೀತೆ ಹಾಡಿದರು. ವಿದ್ಯಾರ್ಥಿ ನಾಯಕ ವಂಶಿತ್ ಸ್ವಾಗತಿಸಿ, ವಿದ್ಯಾರ್ಥಿ ನಾಯಕಿ ಮಿಥಿಲಾಶ್ರೀ ವಂದಿಸಿದರು. ವಿದ್ಯಾರ್ಥಿಗಳಾದ ಉತ್ಸವ್ ಮತ್ತು ರೀಮಾ ಕಾರ್ಯಕ್ರಮ ನಿರೂಪಿಸಿದರು. ಶೈಕ್ಷಣಿಕ ಸಲಹೆಗಾರರಾದ ಶಿಕ್ಷಕಿ ರೇಣುಕಾ ಉತ್ತಪ್ಪ, ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿಗಳು ಸಹಕರಿಸಿದರು. ವಿದ್ಯಾರ್ಥಿಗಳ ಪೋಷಕರು, ಕಮಿಟಿ ಬಿ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.