ಬಳ್ಪ ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ ಡಿ. 22ರಿಂದ ಡಿ. 27ರ ತನಕ ನಡೆಯಲಿದೆ.
ಡಿ. 20ರಂದು ಬೆಳಿಗ್ಗೆ ಗೊನೆ ಮುಹೂರ್ತ, ಧ್ವಜಸ್ಥಂಭ ಮುಹೂರ್ತ, ಬೆತ್ತ ಮುಹೂರ್ತ ಮತ್ತು ರಥ ಮುಹೂರ್ತ ನಡೆಯಿತು.
ಡಿ. 22ರಂದು ಹಸಿರುವಾಣಿ ಸಂಗ್ರಹ, ಸಂಜೆ ಉಗ್ರಾಣ ಮುಹೂರ್ತ ನಡೆಯಲಿದೆ. ಡಿ. 23ರಂದು ಶ್ರೀ ದುರ್ಗಾಪರಮೇಶ್ವರಿ ಸನ್ನಿಧಿಯಲ್ಲಿ ವಿವಿಧ ವೈದಿಕ ಕಾರ್ಯಕ್ರಮಗಳು ನಡೆಯಲಿದೆ.
ಡಿ. 24ರಿಂದ ಡಿ. 27ರ ತನಕ ಶ್ರೀ ತ್ರಿಶೂಲಿನೀ ಅಮ್ಮನವರ ಸನ್ನಿಧಿಯಲ್ಲಿ ವಿವಿಧ ವೈದಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಡಿ. 26ರಂದು ಬ್ರಹ್ಮ ರಥೋತ್ಸವ, ಬಳ್ಪ ಬೆಡಿ ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮವಾಗಿ ಸಂಜೆ ವಿವಿಧ ಭಜನಾ ತಂಡಗಳಿಂದ ನೃತ್ಯ ಭಜನಾ ಸಂಕೀರ್ತನೆ ಮತ್ತು ಜಗದೀಶ್ ಆಚಾರ್ಯ ಪುತ್ತೂರು ಇವರಿಂದ ಸಂಗೀತ ಗಾನ ಸಂಭ್ರಮ ನಡೆಯಲಿದೆ.