ಅರಂತೋಡು – ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿ ಚುನಾವಣೆ

0

ಕಾಂಗ್ರೆಸ್ ಬೆಂಬಲಿತ ಏಳು ಮಂದಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ

ಅರಂತೋಡು – ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಿರ್ದೇಶಕರುಗಳ ಆಯ್ಕೆಗೆ ಡಿ.28ರಂದು ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಬೆಂಬಲಿತ ಏಳು ಮಂದಿ ಅಭ್ಯರ್ಥಿಗಳು ಡಿ.20ರಂದು ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು.

ಸಾಲಗಾರ ಸಾಮಾನ್ಯ ಕ್ಷೇತ್ರದಿಂದ ತೇಜನಾಥ ಬನ, ತಾಜುದ್ಧೀನ್ ಅರಂತೋಡು, ಹಿಂದುಳಿದ ವರ್ಗ ಪ್ರವರ್ಗ ಬಿ ಕ್ಷೇತ್ರದಿಂದ ತೀರ್ಥರಾಮ ಪರ್ನೋಜಿ, ಪರಿಶಿಷ್ಟ ಜಾತಿ ಕ್ಷೇತ್ರದಿಂದ ಚೌಕರು ಕಟ್ಟಕೋಡಿ, ಪರಿಶಿಷ್ಟ ಪಂಗಡ ಕ್ಷೇತ್ರದಿಂದ ನಾರಾಯಣ ನಾಯ್ಕ ಮೊಟ್ಟೆಂಗಾರ್, ಸಾಮಾನ್ಯ ಮಹಿಳಾ ಕ್ಷೇತ್ರದಿಂದ ವಸಂತಿ ಬಾಳೆಕಜೆ ಹಾಗೂ ಸಾಲಗಾರರಲ್ಲದ ಕ್ಷೇತ್ರದಿಂದ ಹೂವಯ್ಯ ಚೂರ್ನಾಡು ಅವರು ನಾಮಪತ್ರ ಸಲ್ಲಿಸಿದರು. ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.