ಕನಕಮಜಲು ಸಹಕಾರಿ ಸಂಘದ ಆಡಳಿತ ಮಂಡಳಿ ಚುನಾವಣೆ

0

ಬಿಜೆಪಿ ಬಂಡಾಯ ಅಭ್ಯರ್ಥಿ ಗಂಗಾಧರ ಕಾಳಮನೆ ಗೆಲುವು


ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿ ಚುನಾವಣೆಯಲ್ಲಿ ಸಾಲಗಾರ ಸಾಮಾನ್ಯ ಕ್ಷೇತ್ರದಿಂದ ಬಿಜೆಪಿ ಬಂಡಾಯ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ
ಗಂಗಾಧರ ಕಾಳಮನೆ ಅವರು 7 ಮತಗಳ ಅಂತರದಿಂದ ತಮ್ಮ ಪ್ರತಿಸ್ಪರ್ಧಿ ಬಿಜೆಪಿ ಅಭ್ಯರ್ಥಿ ರಘುರಾಮ ಮಾಸ್ತರ್ ಬುಡ್ಲೆಗುತ್ತು ಅವರನ್ನು ಪರಾಭವಗೊಳಿಸಿದ್ದಾರೆ.