ಅರಂತೋಡು: ಬಿಳಿಯಾರು ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಕಮರಿಗೆ – ಇಬ್ಬರಿಗೆ ಗಾಯ

0

ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿ ಕಮರಿಗೆ ಪಲ್ಟಿಯಾಗಿ ತಂದೆ ಮತ್ತು ಮಗ ಗಾಯಗೊಂಡು , ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಘಟನೆ ಅರಂತೋಡು ಗ್ರಾಮದ ಬಿಳಿಯಾರಿನಲ್ಲಿ ಡಿ‌.22ರಂದು ರಾತ್ರಿ ಸಂಭವಿಸಿದೆ.

ಮಡಿಕೇರಿಯಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರಿನ ಚಾಲಕನಿಗೆ ನಿದ್ರೆ ಆವರಿಸಿದ ಹಿನ್ನೆಲೆಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿ ಹೊಡೆಯಿತೆನ್ನಲಾಗಿದೆ. ಕಾರಿನಲ್ಲಿ ತಂದೆ ಮತ್ತು ಮಗ ಇದ್ದು, ಅವರು ಸುಳ್ಯದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿರುವುದಾಗಿ ತಿಳಿದುಬಂದಿದೆ.