ಪೆರಾಜೆ ಜ್ಯೋತಿ ಪ್ರೌಢ ಶಾಲೆಯಲ್ಲಿ ವಾರ್ಷಿಕ ಕ್ರೀಡೋತ್ಸವ

0

ಪೆರಾಜೆ ಜ್ಯೋತಿ ಪ್ರೌಢ ಶಾಲೆಯಲ್ಲಿ ವಾರ್ಷಿಕ ಕ್ರೀಡೋತ್ಸವ ನಡೆಯಿತು.

ಕಾರ್ಯಕ್ರಮದ ಸಭಾ ಅಧ್ಯಕ್ಷತೆ ಯನ್ನು ಜ್ಯೋತಿ ವಿದ್ಯಾಸಂಘದ ಅಧ್ಯಕ್ಷರಾದ ಎನ್ ಎ ಜ್ಞಾನೇಶ್ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಜೋಕಿಮ್ಸ್ ಪವಿಪೂರ್ವ ಕಾಲೇಜಿನ ದೈಹಿಕ ಶಿಕ್ಷಕ ತೀರ್ಥವರ್ಣ ಬಳ್ಳಡ್ಕ ರವರು ಭಾಗವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಸಭಾ ವೇದಿಕೆಯಲ್ಲಿ ನಿರ್ದೇಶಕರಾದ ಅಶೋಕ್ ಪೀಚೆ, ಗ್ರಾಮಪಂಚಾಯತ್ ಸದಸ್ಯ ರಾದ ಭೂದೇವಿ ನಾಯಕ್, ಪೋಷಕ ಸಮಿತಿ ಅಧ್ಯಕ್ಷರಾದ ಜಯರಾಮ ಕದಿಕಡ್ಕ. ಮುಖ್ಯ ಶಿಕ್ಷಕರಾದ ನಾಗರಾಜ್ ಜಿ ಆರ್, ವಸತಿನಿಲಯ ಮೇಲ್ವಿಚಾರಕರಾದ ಶಂಬು ಸರ್ ವೇದಿಕೆ ಯಲ್ಲಿದ್ದರು. ದೈಹಿಕ ಶಿಕ್ಷಕ ನಿತಿನ್ ಮಜಿ ಕೋಡಿ ವಂದಿಸಿ, ಚಂದ್ರಮತಿ ಕುಂಬಳಚೇರಿ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿಗಳಿಗೆ ವಿವಿಧ ಆಟೋಟ ಸ್ಪರ್ಧೆ ಗಳು ನಡೆಸಲಾಯಿತು.