ಹಿರಿಯ ವಿದ್ಯಾರ್ಥಿಗಳು ಸಂಸ್ಥಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ : ಡಾ. ಉಜ್ವಲ್ ಯು.ಜೆ
ಸಂಸ್ಥೆಯೊಂದರಲ್ಲಿ ವಿದ್ಯಾಭ್ಯಾಸ ಮಾಡಿ ಹೊರಹೋದ ವಿದ್ಯಾರ್ಥಿಗಳು ಸಮಾಜಮುಖಿ ಕಾರ್ಯದಲ್ಲಿ ತೊಡಗಿ ಕೊಂಡಾಗ ಅವರ ಬೆಳವಣಿಗೆಯ ಜೊತೆ ಸಂಸ್ಥೆಯೂ ಬೆಳವಣಿಗೆಯಾಗುತ್ತದೆ ಎಂದು ಕೆವಿಜಿ ಪಾಲಿಟೆಕ್ನಿಕ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಯು.ಜೆ ಅಭಿಪ್ರಾಯಪಟ್ಟರು.
ಅವರು ಸುಳ್ಯದ ಕುರುಂಜಿ ವೆಂಕಟ್ರಮಣಗೌಡ ಪಾಲಿಟೆಕ್ನಿಕ್ ನ ರಾಷ್ಟ್ರೀಯ ಸೇವಾ ಯೋಜನೆಯ ಹಿರಿಯ ವಿದ್ಯಾರ್ಥಿಗಳ ಸಂಘ ಎನ್.ಎಸ್.ಎಸ್ ಸೇವಾ ಸಂಗಮದ ದಶಮಾನೋತ್ಸವದ ಅಂಗವಾಗಿ ಸಂಸ್ಥೆಗೆ ಕಸದ ಬುಟ್ಟಿ ಕೊಡುಗೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಾಲೇಜಿನ ಪ್ರಾಂಶುಪಾಲ ಶ್ರೀಧರ್ ಎಂ.ಕೆ ಯವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪ ಪ್ರಾಂಶುಪಾಲ ಅಣ್ಣಯ್ಯ ಕೆ, ವಿಭಾಗ ಮುಖ್ಯಸ್ಥರುಗಳಾದ ಎಂ.ಎನ್. ಚಂದ್ರಶೇಖರ್, ಹರೀಶ್ ಕುಮಾರ್, ಯತೀಶ್ ಕೆ.ಎನ್, ಬಿಂದು ಕೆ.ವಿ, ಉಪನ್ಯಾಸಕ ಅಣ್ಣಪ್ಪ ಜಿ.ಕೆ ಹಾಗೂ ಅಧೀಕ್ಷಕರುಗಳಾದ ಧನಂಜಯ ಕಲ್ಲುಗದ್ದೆ, ಶಿವರಾಮ ಕೇರ್ಪಳ ಮೊದಲಾದವರು ಉಪಸ್ಥಿತರಿದ್ದರು. ಎನ್ಎಸ್ಎಸ್ ಸೇವಾ ಸಂಗಮದ ಅಧ್ಯಕ್ಷ ರಕ್ಷಿತ್ ಬೊಳ್ಳೂರು, ಸಂಘಟನಾ ಕಾರ್ಯದರ್ಶಿ ಸುಜಿತ್ ಎಂ.ಎಸ್ ನಿರ್ದೇಶಕರುಗಳಾದ ಸುಶಾಂತ್ ಅಜ್ಜಿಕಲ್ ಮತ್ತು ಆದರ್ಶ ಕಸದ ಬುಟ್ಟಿಗಳನ್ನು ಹಸ್ತಾಂತರಿಸಿದರು. ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ಚಂದ್ರಶೇಖರ ಬಿಳಿನೆಲೆ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಉಪನ್ಯಾಸಕ ಸುನಿಲ್ ಕುಮಾರ್ ಎನ್.ಪಿ ವಂದಿಸಿದರು.
ಸಂಸ್ಥೆಯ ಎಲ್ಲಾ ತರಗತಿ ಕೊಠಡಿಗಳಿಗೆ ಮತ್ತು ಪ್ರಯೋಗಾಲಯಗಳಿಗೆ ಒಟ್ಟು 25 ಕಸದ ಬುಟ್ಟಿಗಳನ್ನು ಅಳವಡಿಸಲಾಯಿತು.