ಕಡೆಪಾಲ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ಮತ್ತು ಸ್ವಾಮಿ ಕೊರಗಜ್ಜ ದೈವಸ್ಥಾನದ ಆಮಂತ್ರಣ ಪತ್ರಿಕೆ ಬಿಡುಗಡೆ

0

ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ಮತ್ತು ಸ್ವಾಮಿ ಕೊರಗಜ್ಜ ದೈವಸ್ಥಾನ ಕಡೆಪಾಲ ಇದರ 4ನೇ ವರ್ಷದ ಕಾಲಾವಧಿ ನೇಮೋತ್ಸವದ ಆಮಂತ್ರಣ ಪತ್ರಿಕೆಯನ್ನು ದೈವಸ್ಥಾನದ ವಠಾರದಲ್ಲಿ ಬಿಡುಗಡೆಗೊಳಿಸಲಾಯಿತು. ಶ್ರೀ ವಿಷ್ಣು ಮಿಲ್ಕ್ ಪಾರ್ಲರ್ ಕಲ್ಲುಗುಂಡಿ ಇದರ ಮಾಲಕರಾದ ನಾಗೇಶ್ ಕೆ. ಕಲ್ಲುಗುಂಡಿ ಇವರು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು. ದೈವಸ್ಥಾನದ ಆಡಳಿತ ಮಂಡಳಿಯ ಅದ್ಯಕ್ಷರು ಮತ್ತು ಸರ್ವ ಸದಸ್ಯರು ಉಪಸ್ಥಿತರಿದ್ದರು.