ಕೊಯನಾಡು ಶಾಲಾ ಹಳೆಕಟ್ಟಡದಲ್ಲಿ ತಾತ್ಕಾಲಿಕವಾಗಿ ತರಗತಿ ನಡೆಸುವಂತೆ ಶಿಕ್ಷಣ ಇಲಾಖೆಗೆ ಶಾಸಕ ಪೊನ್ನಣ್ಣ ಸೂಚನೆ

0

ಕೊಡಗು ಸಂಪಾಜೆ ಗ್ರಾಮದ ಕೊಯನಾಡು ಸ‌.ಹಿ.ಪ್ರಾ. ಶಾಲಾ ಹಳೆಯ ಕಟ್ಟಡದಲ್ಲಿ ಮೂರು ತಿಂಗಳ ಮಟ್ಟಿಗೆ ತರಗತಿ ನಡೆಸುವಂತೆ ಮಡಿಕೇರಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಕೊಡಗು ಜಿಲ್ಲಾಧಿಕಾರಿಗಳಿಗೆ ಶಾಸಕ ಎ.ಎಸ್. ಪೊನ್ನಣ್ಣ ಅವರು ಸೂಚಿಸಿದ್ದಾರೆ‌.

ಕೊಯನಾಡು ಶಾಲೆಯ ಹೊಸ ಕಟ್ಟಡದ ಹಿಂಭಾಗದಲ್ಲಿ ಕಳೆದ ಮಳೆಗಾಲದಲ್ಲಿ ಭೂಕುಸಿತ ಸಂಭವಿಸಿ, ಮಣ್ಣು ಜರಿದು ಬಿದ್ದ ಕಾರಣ ಶಾಲೆಯನ್ನು ಸಂಪೂರ್ಣವಾಗಿ ಮುಚ್ಚಿ, ಸಂಪಾಜೆ ಶಾಲೆಗೆ ವಿದ್ಯಾರ್ಥಿಗಳು ಮತ್ತು ಶಿಕ್ಷಕರನ್ನು ವರ್ಗಾವಣೆ ಮಾಡಲಾಗಿತ್ತು‌.

ಇದೀಗ ಶಾಸಕ ಎ.ಎಸ್. ಪೊನ್ನಣ್ಣ ಅವರು ಶಾಲಾ ಹಳೆಯ ಕಟ್ಟಡದಲ್ಲಿ ಮೂರು ತಿಂಗಳ ಅವಧಿಗೆ ತಾತ್ಕಾಲಿಕವಾಗಿ ತರಗತಿ ನಡೆಸುವಂತೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.