ಕುಂದಾಪುರದ ಕೋಟೇಶ್ವರದಲ್ಲಿ ತಯಾರಿಸಲ್ಪಟ್ಟು ಸುಳ್ಯದ ಚೆನ್ನಕೇಶವ ದೇವಸ್ಥಾನಕ್ಕೆ ರಸ್ತೆ ಮೂಲಕವಾಗಿ ಸಾಗಿ ಬರುತ್ತಿರುವ, ಡಾ.ಕೆ.ವಿ.ಚಿದಾನಂದ ಗೌಡರ ಕೊಡುಗೆಯಾದ ಬ್ರಹ್ಮರಥಕ್ಕೆ ದ.24 ರಂದು ಮಂಗಳೂರಿನ ಕೆಪಿಟಿ ವೃತ್ತದ ಬಳಿ ಮಂಗಳೂರು ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘದ ವತಿಯಿಂದ ಅಭೂತಪೂರ್ವ ಸ್ವಾಗತ ನೀಡಿ ಪೂಜೆ ಸಲ್ಲಿಸಿ ಬೀಳ್ಕೊಡಲಾಯಿತು.
ಸಂಘದ ಅಧ್ಯಕ್ಷರಾದ ಲೋಕಯ್ಯ ಗೌಡ ಕೆ. ಮತ್ತು ಸಂಘದ ಪದಾಧಿಕಾರಿಗಳು, ಸದಸ್ಯರುಗಳು ಹಾಗೂ ಮಹಿಳಾ ಮತ್ತು ಯುವ ಘಟಕದ ಪದಾಧಿಕಾರಿಗಳು ಉಪಸ್ಥಿತರಿದ್ದು ಶುಭ ಹಾರೈಸಿದರು.
ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾ. ಬ್ರಿಜೇಶ್ ಚೌಟ, ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಭರತ್ ಶೆಟ್ಟಿ , ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಮತ್ತು ನೂರಾರು ಮಂದಿ ಭಗವದ್ಭಕ್ತರು ಹಾಜರಿದ್ದು ಶುಭ ಹಾರೈಸಿದರು. ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಸ್ವಾಮೀಜಿ ಧರ್ಮಪಾಲನಾಥ ಸ್ವಾಮೀಜಿಯವರು ಉಪಸ್ಥಿತರಿದ್ದು ಶುಭ ಹಾರೈಸಿದರು. ರಥದ ಜಾಥಾದೊಡನೆ ಪ್ರಯಾಣ ಬೆಳೆಸಿರುವ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಪ್ರಧಾನ ಕಾರ್ಯದರ್ಶಿ ಅಕ್ಷಯ ಕೆ.ಸಿ. ಅವರಿಗೆ ಎಲ್ಲರೂ ಅಭಿನಂದನೆಗಳನ್ನು ಸಲ್ಲಿಸಿ ಶುಭ ಹಾರೈಸಿದರು. ಪ್ರತಿಯಾಗಿ ಅವರು ಎಲ್ಲರಿಗೂ ತಮ್ಮ ಧನ್ಯವಾದಗಳನ್ನು ತಿಳಿಸಿ ಸುಳ್ಯದ ಕಡೆಗೆ ಪ್ರಯಾಣ ಮುಂದುವರಿಸಿದರು.