ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಜ. 3 ರಿಂದ 5 ರವರೆಗೆ ನಡೆಯುವ ವಸಂತ ಸಂಭ್ರಮ ಕಾರ್ಯಕ್ರಮದ ಪೂರ್ವಭಾವಿ ಸಭೆಯು ಡಿ.24ರಂದು ವಸಂತ ಸಂಭ್ರಮ ಸಮಿತಿಯ ಗೌರವ ಅಧ್ಯಕ್ಷ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ರವರ ಅಧ್ಯಕ್ಷತೆಯಲ್ಲಿ ಡಿ.24 ರಂದು ಶಾಲೆಯಲ್ಲಿ ನಡೆಯಿತು.
ವಿವಿಧ ಸಮಿತಿಯ ಸಂಚಾಲಕರುಗಳು,ಸದಸ್ಯರು ಸೂಕ್ತ ಸಲಹೆ ಸೂಚನೆ, ಅನಿಸಿಕೆ ವ್ಯಕ್ತಪಡಿಸಿದರು.
ಸಭೆಯಲ್ಲಿ ಸಮಿತಿಯ ಸಂಚಾಲಕ ಎಸ್ ಎನ್ ಮನ್ಮಥ, ಅಧ್ಯಕ್ಷೆ ಶ್ರೀಮತಿ ರಾಜೀವಿ ಆರ್ ರೈ, ಗೌರವ ಸಲಹೆಗಾರ ಸುರೇಶ್ ಕುಮಾರ್ ಶೆಟ್ಟಿ ಪನ್ನೆ, ಶಾಲಾ ಎಸ್.ಡಿ.ಎಂ.ಸಿ ಉಪಾಧ್ಯಕ್ಷ ಶ್ರೀನಾಥ ರೈ ಬಾಳಿಲ, ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ನಮಿತಾ ಎಲ್ ರೈ,
ಕಾಲೇಜಿನ ಪ್ರಾಂಶುಪಾಲ ಜನಾರ್ಧನ ಕೆ.ಎನ್, ಉಪ ಪ್ರಾoಶುಪಾಲೆ ಉಮಾಕುಮಾರಿ, ಮುಖ್ಯ ಶಿಕ್ಷಕ ಮಾಯಿಲಪ್ಪ, ವಸಂತ ಸಂಭ್ರಮದ ವಿವಿಧ ಸಮಿತಿಯ ಸದಸ್ಯರು, ಪೋಷಕರು, ಉಪನ್ಯಾಸಕ ವೃಂದ, ಶಿಕ್ಷಕರು ಉಪಸ್ಥಿತರಿದ್ದರು.
ಸಮಿತಿಯ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕುಮಾರ್ ರೈ ಪನ್ನೆ ಪ್ರಾಸ್ತಾವಿಕವಾಗಿ ಮಾತನಾಡಿ ಕಾರ್ಯಕ್ರಮ ನಿರ್ವಹಿಸಿದರು.