ಪೆರಾಜೆ ಸೊಸೈಟಿ ಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣನವರ ಭೇಟಿ

0

ವಿರಾಜಪೇಟೆ ವಿಧಾನಸಭಾ ಕ್ಷೇತ್ರ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್. ಪೊನ್ನಣ್ಣರವರು ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಡಿ.24 ರಂದು ಭೇಟಿ ನೀಡಿ ನೂತನ ಕಚೇರಿ ಹಾಗೂ ಸಭಾಭವನವನ್ನು ವೀಕ್ಷಿಸಿ ಶುಭ ಹಾರೈಸಿದರು.

ಸಂಸ್ಥೆಯ ಅಧ್ಯಕ್ಷರಾದ ನಾಗೇಶ್ ಕುಂದಲ್ಪಾಡಿ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಅಶೋಕ ಪಿ.ಎಂ., ನಿರ್ದೇಶಕರುಗಳಾದ ಜಯರಾಮ್ ಎನ್.ಬಿ., ಶೇಷಪ್ಪ ನಾಯ್ಕ ನಿಡ್ಯಮಲೆ, ಧನಂಜಯ ಕೋಡಿ, ಗ್ರಾಮ ಪಂಚಾಯತ್ ಸದಸ್ಯ ಸುರೇಶ್ ಪೆರುಮುಂಡ, ಮಡಿಕೇರಿ ತಾಲೂಕು ಸಾಗುವಳಿ ಸಕ್ರಮೀಕರಣ ಸಮಿತಿ ಸದಸ್ಯರಾದ ತುಳಸಿ ಗಾಂಧಿಪ್ರಸಾದ್, ಕಂದಾಯ ನಿರೀಕ್ಷಕರಾದ ವೆಂಕಟೇಶ್, ಗ್ರಾಮ ಪಂಚಾಯತ್ ಪಿ ಡಿ ಓ ಕುಮಾರ, ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಸದಸ್ಯ ಗೋಪಾಲ್ ಪೆರಾಜೆ, ಸಂಸ್ಥೆಯ ಸದಸ್ಯರುಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.