ಕನಕಮಜಲು: ಗ್ರಾಮ ಪಂಚಾಯತಿ ಮಟ್ಟದ ಜನಸುರಕ್ಷಾ ಅಭಿಯಾನ

0

ದ.ಕ. ಜಿಲ್ಲಾ ಪಂಚಾಯತ್ ಹಾಗೂ ಲೀಡ್‌ ಬ್ಯಾಂಕ್‌ ಉಲ್ಲೇಖದ ಪ್ರಕಾರ ಗ್ರಾಮ ಪಂಚಾಯತ್‌ ಮಟ್ಟದ “ಜನ ಸುರಕ್ಷಾ ಅಭಿಯಾನ 2024-25 ಕನಕಮಜಲು ಗ್ರಾಮ ಪಂಚಾಯತಿ ಸಭಾಭವನದಲ್ಲಿ ಡಿ.26ರಂದು ನಡೆಯಿತು.
ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಶಾರದಾ ಉಗ್ಗಮೂಲೆ ಅವರು ಅಧ್ಯಕ್ಷತೆ ವಹಿಸಿದ್ದರು.


ಕಾರ್ಯಕ್ರಮದಲ್ಲಿ ಕೆನರಾ ಬ್ಯಾಂಕ್ಆಪ್ತ ಸಮಾಲೋಚಕಿ ಶ್ರೀಮತಿ ಸುಜಾತ ಅವರು ರಾಷ್ಟ್ರೀಕೃತ ಬ್ಯಾಂಕ್‌ ಗಳಲ್ಲಿ ಇರುವ ಯೋಜನೆಗಳ ಬಗ್ಗೆ, ಸಾಮಾಜಿಕ ಭದ್ರತಾ ಯೋಜನೆಗಳ ಮಾಹಿತಿ ಹಾಗೂ ಪ್ರಧಾನ ಮಂತ್ರಿ ಜೀವನ್‌ ಜ್ಯೋತಿ ಭೀಮಾ ಯೋಜನೆ, ಪ್ರಧಾನಮಂತ್ರಿ ಸುರಕ್ಷಾ ಭೀಮಾ ಯೋಜನೆ ಮತ್ತು ಅಟಲ್‌ ಪಿಂಚಣಿ ಯೋಜನೆಗಳ ಕುರಿತು ಮಾಹಿತಿ ಹಾಗೂ ನೊಂದಣಿ ಕಾರ್ಯಕ್ರಮವನ್ನು ನಡೆಸಿದರು.

ಈ ಕಾರ್ಯಕ್ರಮದಲ್ಲಿ ಕೆನರಾ ಬ್ಯಾಂಕ್‌ ಜಾಲ್ಸೂರು ಶಾಖಾ ಪ್ರಭಂದಕಿ ಮಹಾಲಕ್ಷ್ಮಿ, ಕನಕಮಜಲು ಗ್ರಾ.ಪಂ ಸದಸ್ಯರುಗಳು, ಸಂಘ ಸಂಸ್ಥೆಯ ಪ್ರತಿನಿಧಿಗಳು, ಗ್ರಾ.ಪಂ. ಅಧಿಕಾರಿಗಳು ಮತ್ತು ಸಿಬ್ಬಂದಿವರ್ಗ ಗ್ರಾಮಸ್ಥರು ಉಪಸ್ಥಿತರಿದ್ದರು.