ಸುಳ್ಯ ಶ್ರೀ ಚೆನ್ನಕೇಶವ ದೇವರ ಜಾತ್ರೋತ್ಸವದ ಅಂಗವಾಗಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ವತಿಯಿಂದ ಹಸಿರುಕಾಣಿಕೆ ಸಮರ್ಪಣೆ ಜ. 7ರಂದು ನಡೆಯಿತು.
ಎ.ಒ.ಎಲ್.ಇ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ, ಉಪಾಧ್ಯಕ್ಷೆ ಶ್ರೀಮತಿ ಶೋಭಾ ಚಿದನಾಂದ, ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ.ಸಿ, ನಿರ್ದೇಶಕ ಧನಂಜಯ ಮದುವೆಗದ್ದೆ, ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ.ವಿ, ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಡೀನ್ ಡಾ. ನೀಲಾಂಬಿಕೈ ನಟರಾಜನ್ ಸೇರಿದಂತೆ ವಿವಿಧ ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲರು, ಮುಖ್ಯಸ್ಥರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.