ಅರಂತೋಡು: ನೆಹರು ಸ್ಮಾರಕ ಪದವಿಪೂರ್ವ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಕಾರ್ಯಕ್ರಮ

0

ನೆಹರು ಸ್ಮಾರಕ ಪದವಿಪೂರ್ವ ಕಾಲೇಜು ಅರಂತೋಡು ಇಲ್ಲಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಕ್ರಮ ನಡೆಸಲಾಯಿತು ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭೌತಶಾಸ್ತ್ರ ಉಪನ್ಯಾಸಕರಾದ ಶ್ರೀ ಸುರೇಶ್ ವಾಗ್ಲೆ ವಹಿಸಿಕೊಂಡಿದ್ದರು ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾದ ಶ್ರೀಮತಿ ಗಾಯತ್ರಿ ಜಿಲ್ಲಾ ಮುಖ್ಯ ಗ್ರಂಥಾಲಯಾಧಿಕಾರಿ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಮಾರ್ಗದರ್ಶನ ನೀಡಿದರು.

ಅರ್ಥಶಾಸ್ತ್ರ ಉನ್ಯಾಸಕ ಚಂದ್ರಶೇಖರ ಎಂ ಸ್ವಾಗತಿಸಿದರು ಮತ್ತು ರಾಜ್ಯಶಾಸ್ತ್ರ ಉಪನ್ಯಾಸಕ ಶ್ರೀ ಪದ್ಮಕುಮಾರ್ ಕಾರ್ಯಕ್ರಮ ನಿರೂಪಿಸಿದರು ಇತಿಹಾಸ ಉಪನ್ಯಾಸಕ ಮೋಹನಚಂದ್ರ ಮತ್ತು ಸಮಾಜಶಾಸ್ತ್ರ ಉಪನ್ಯಾಸಕಿ ಶ್ರೀಮತಿ ನಂದಿನಿ ಉಪಸ್ಥಿತರಿದ್ದರು.