ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಕಮಿಟಿ ‘ಬಿ’ಇದರ ಅಧ್ಯಕ್ಷರು, ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಡಾ.ರೇಣುಕಾ ಪ್ರಸಾದ್ ಕೆ.ವಿ ಅವರ ನೇತೃತ್ವದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ ಕಮಿಟಿ ಬಿ ವತಿಯಿಂದಸುಳ್ಯದ ಶ್ರೀ ಚೆನ್ನಕೇಶವ ದೇವಸ್ಥಾನದ ಜಾತ್ರೋತ್ಸವದ ಪ್ರಯುಕ್ತ ಹಸಿರುವಾಣಿ ಸಮರ್ಪಣೆ ಮಾಡಲಾಯಿತು.
ಡಾ.ರೇಣುಕಾ ಪ್ರಸಾದ್ ಕೆ.ವಿ. ಅವರ ಆಡಳಿತ ಕಚೇರಿ ಕೆ.ವಿ.ಜಿ. ಪಾಲಿಟೆಕ್ನಿಕ್ ಮುಂಭಾಗದಿಂದ ಮೆರವಣಿಗೆ ಪ್ರಾರಂಭಗೊಂಡಿತು. ತೆಂಗಿನ ಕಾಯಿ ಒಡೆಯುವ ಮೂಲಕ ಡಾ.ಕೆ.ವಿ.ರೇಣುಕಾ ಪ್ರಸಾದ್ ಮೆರವಣಿಗೆಗೆ ಚಾಲನೆ ನೀಡಿದರು. ಸುಳ್ಯದ ಪ್ರಮುಖ ಬೀದಿಗಳಲ್ಲಿ ಸಾಗಿ ಶ್ರೀ ಚೆನ್ನಕೇಶವ ದೇವಸ್ಥಾನದ ಮುಂಭಾಗದಲ್ಲಿ ಸಮರ್ಪಣೆ ಮಾಡಲಾಯಿತು. ಚೆನ್ನಕೇಶವ ದೇವಸ್ಥಾನದ ಕವಳಿಗೆ ಮನೆತನದ ವೀರ ಕೇಸರಿ ಮತ್ತಿತರರು ಸ್ವಾಗತಿಸಿದರು.
ಈ ಸಂಧರ್ಭದಲ್ಲಿ ಡಾ.ರೇಣುಕಾ ಪ್ರಸಾದ್ ಕೆ.ವಿ., ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಕಮಿಟಿ”ಬಿ”ಇದರ ಪ್ರಧಾನ ಕಾರ್ಯದರ್ಶಿ ಡಾ.ಜ್ಯೋತಿ ಆರ್.ಪ್ರಸಾದ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಉಜ್ವಲ್ ಯು.ಜೆ, ನಗರ ಪಂಚಾಯತ್ ಮಾಜಿ ಎನ್.ಎ.ರಾಮಚಂದ್ರ,ಕೆ.ವಿ.ಜಿ.ದಂತ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಮೋಕ್ಷ ನಾಯಕ್ ,ಕೆ.ವಿ.ಜಿ.ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಸುರೇಶ್, ಕೆ.ವಿ.ಜಿ.ಪಾಲಿಟೆಕ್ನಿಕ್ ಪ್ರಾಂಶುಪಾಲರಾದ ಅಣ್ಣಯ್ಯ.ಕೆ, ಉಪಪ್ರಾಂಶುಪಾಲರಾದ ಹರೀಶ್.ಪಿ, ಕೆ.ವಿ.ಜಿ.ಐ.ಟಿ.ಐ ಪ್ರಾಂಶುಪಲರಾದ ಚಿದಾನಂದ ಗೌಡ ಬಾಳಿಲ, ಉಪ ಪ್ರಾಂಶುಪಾಲರಾದ ದಿನೇಶ್ ಮಡ್ತಿಲ, ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ.ಯಶೋಧ ರಾಮಚಂದ್ರ, ಉಪ ಪ್ರಾಂಶುಪಾಲರಾದ ದೀಪಕ್ ವೈ.ಆರ್, ಡಾ.ಮನೋಜ್ ಅಡ್ಡಂತ್ತಡ್ಜ, ಡಾ.ರೇವಂತ್ ಪ್ರಮುಖರಾದ ಬಿ.ಟಿ.ಮಾಧವ, ಪ್ರಸನ್ನ ಕಲ್ಲಾಜೆ, ಶಿವರಾಮ ಕೇರ್ಪಳ, ನಾಗೇಶ್ ಕೊಚ್ಚಿ, ಕಮಲಾಕ್ಷ ನಂಗಾರು, ಸುನಿಲ್ ಕೇರ್ಪಳ, ವಸಂತ ಕಿರಿಭಾಗ ಪ್ರೀತಂ. ಡಿ.ಕೆ, ವಿಶ್ವನಾಥ ಕುಂಚಡ್ಕ, ಆನಂದ ಅಟ್ಲೂರು , ಅರುಣ್ ಕುರುಂಜಿ, ಶ್ರೀಕಾಂತ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಕೆವಿಜಿ ದಂತ ಮಹಾವಿದ್ಯಾಲಯ, ಕೆವಿಜಿ ಇಂಜಿನಿಯರಿಂಗ್ ಕಾಲೇಜು, ಕೆವಿಜಿ ಪಾಲಿಟೆಕ್ನಿಕ್, ಕೆವಿಜಿ ಐಪಿಎಸ್, ಕೆವಿಜಿ ಅಮರಜ್ಯೋತಿ, ಕೆವಿಜಿ ಐಟಿಐ,ಭಾಗಮಂಡಲ ಐಟಿಐ ವತಿಯಿಂದ ಹಸಿರುವಾಣಿ ಸಮರ್ಪಣೆ ಮಾಡಿದರು.