ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಮೈಸೂರು ಇವರು ನಡೆಸಿದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಕು. ಚಾರ್ವಿ ಕುಲಾಲ್ ಅಂಕತ್ತಡ್ಕರವರು ೪೦೦ ಕ್ಕೆ ೩೭೦(೯೨.೫%) ಅಂಕಗಳೊಂದಿಗೆ
ವಿಶೇಷ ಶ್ರೇಣಿಯಲ್ಲಿ ತೇರ್ಗಡೆಹೊಂದಿದ್ದಾರೆ. ಸುಳ್ಯದ ಕನಕಮಜಲು ವಿದುಷಿ ಅನನ್ಯ ತೇಜಸ್ ಇವರ ಶಿಷ್ಠೆಯಾಗಿದ್ದು, ಪುತ್ತೂರು ತೆಂಕಿಲ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯಲ್ಲಿ ೭ ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಇವರು ಕಳಂಜ ಬಾಳಿಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಪ್ರಧಾನ ಕಛೇರಿಯ ಮೆನೇಜರ್ ಉಮೇಶ್ ಪಂಜಿಗಾರ್ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪೆರ್ಲಾಂಪಾಡಿಯಲ್ಲಿ ಶಿಕ್ಷಕಿಯಾಗಿರುವ ಶ್ರೀಮತಿ ನಮಿತ ದಂಪತಿಯ ಪುತ್ರಿ.