ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ದಲ್ಲಿ ವಾರ್ಷಿಕ ಕ್ರೀಡಾಕೂಟ

0

ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯದಲ್ಲಿ ವಾರ್ಷಿಕ ಕ್ರೀಡಾಕೂಟವು ಜ.10 ರಂದು ನಡೆಯಿತು. ಕ್ರೀಡಾಕೂಟವನ್ನು ಪಂಜ ನಿವೃತ್ತ ದೈಹಿಕ ಶಿಕ್ಷಕರಾದ ಯೊಗೀಶ್ ಪಂಜ ಇವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಗಳಾಗಿ ಶಾಲೆಯ ಹಿರಿಯ ವಿದ್ಯಾರ್ಥಿ ಸುಪ್ರೀತ್ ಅಮೈ ಆಗಮಿಸಿದ್ದರು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಶಾಲಾ ಅಧ್ಯಕ್ಷರಾದ ಗಣೇಶ್ ಪ್ರಸಾದ್ ವಹಿಸಿದ್ದರು. ವೇದಿಕೆಯಲ್ಲಿ ಶಾಲಾ ಸಂಚಾಲಕರಾದ ಚಂದ್ರಶೇಖರ್ ನಾಯರ್, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಶ್ರೀಮತಿ ಭಾರತಿ ದಿನೇಶ್, ಆಡಳಿತ ಮಂಡಳಿಯ ಉಪಾಧ್ಯಕ್ಷರಾದ ಶಿವರಾಮ್ ಏನೇಕಲ್ಲು, ಪ್ರಾಂಶುಪಾಲ ರಾದ ಸಂಕೀರ್ತ್ ಹೆಬ್ಬಾರ್, ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ವಿದ್ಯಾರತ್ನ ಉಪಸ್ಥಿತರಿದ್ದರು. ಕ್ರೀಡಾಕೂಟವು ಧ್ವಜಾರೋಹಣದ ನಂತರ ಪ್ರಾರಂಭಗೊಂಡಿದ್ದು ವಿದ್ಯಾರ್ಥಿಗಳಿಗೆ ಹಾಗೂ ವಿದ್ಯಾರ್ಥಿಗಳ ಹೆತ್ತವರಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಶಿಕ್ಷಕ ಆನಂದ್ ನಿರೂಪಿಸಿದರು.