ಪಂಜ: ಮಹಿಳಾ ಗ್ರಾಮಸಭೆ ಮತ್ತು ಮಹಿಳೆಯರಿಗೆ ಡಿಜಿಟಲ್ ಸಾಕ್ಷರತೆ ಅರಿವು ಕಾರ್ಯಕ್ರಮ

0

ಪಂಜ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಮಹಿಳಾ ಗ್ರಾಮಸಭೆ ಮತ್ತು ಮಹಿಳೆಯರಿಗೆ ಡಿಜಿಟಲ್ ಸಾಕ್ಷಾರತೆ ಅರಿವು ಕಾರ್ಯಕ್ರಮ ಜ.10 ರಂದು ಜರಗಿತು.

ಸಂಪನ್ಮೂಲ ವ್ಯಕ್ತಿಯಾಗಿ ಮಂಡೆಕೋಲು ಅರಿವು ಕೇಂದ್ರದ ಮೇಲ್ವಿಚಾರಕಿ ಶ್ರೀಮತಿ ಸಾವಿತ್ರಿ ರಾಮ್ ಕಣೆಮರಡ್ಕ
ರವರು ಮಹಿಳೆಯರಿಗೆ ಡಿಜಿಟಲ್ ಸಾಕ್ಷರತೆ ಮತ್ತು ಗ್ರಂಥಾಲಯದ ಬಳಕೆಯ ಬಗ್ಗೆ ಮಾಹಿತಿ ನೀಡಿದರು. ತಾಲ್ಲೂಕು ಸಂಜೀವಿನಿ ಸಹಾಯ ಸಂಘದ ಸಂಯೋಜಕರು ಶ್ರೀಮತಿ ಶ್ವೇತಾ ಉಪಸ್ಥಿತರಿದ್ದರು. ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ಶ್ರೀಮತಿ ವಿಜಯಲಕ್ಷ್ಮಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗ್ರಾಮಪಂಚಾಯತ್ ನ ಸರ್ವಸದಸ್ಯರು ಉಪಸ್ಥಿತರಿದ್ದರು.

ಮಾಹಿತಿ ಕಾರ್ಯಾಗಾರ, ಮಹಿಳೆಯರಿಗೆ ಸ್ವರ್ಧೆ ಕಾರ್ಯಕ್ರಮ ಮತ್ತು ವಿಜೇತರಿಗೆ ಬಹುಮಾನ ವಿತರಣೆ ನಡೆಯಿತು. ಕಾರ್ಯಕ್ರಮದಲ್ಲಿ ಪಂಜ ಅರಿವು ಕೇಂದ್ರದ ಮೇಲ್ವಿಚಾರಕಿ ಚಿತ್ರಕಲಾ ಸಿ ಪ್ರಾರ್ಥಿಸಿದರು.ತರುಣ್ MSW ಸ್ವಾಗತಿಸಿದರು. ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಂತ್ ಯು ಬಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಅoಗನವಾಡಿ ಶಿಕ್ಷಕರು, ಅರೋಗ್ಯ ಇಲಾಖೆ ಯವರು, ಸಂಜೀವಿನಿ ಸ್ವಾಹಾಯ ಸಂಘದ ಸದಸ್ಯರು ಹಾಗೂ ಗ್ರಾಮದ ಮಹಿಳೆಯರು ಉಪಸ್ಥಿತರಿದ್ದರು. ಸಂಪನ್ಮೂಲ ವಕ್ತಿಯಾದ ಶ್ರೀಮತಿ ಸಾವಿತ್ರಿ ರಾಮ್ ಕಣೆಮರಡ್ಕರವರನ್ನು ಸನ್ಮಾನಿಸಲಾಯಿತು.

ಮಾಹಿತಿ ಕಾರ್ಯಗಾರ ಮತ್ತು ಸ್ಪರ್ಧಾ ಕಾರ್ಯಕ್ರಮ ಗ್ರಾಮ ಪಂಚಾಯತ್ ಪಂಜ ಅರಿವು ಕೇಂದ್ರ ಪಂಜ ಮತ್ತು ಡಾ|| ಕೆ. ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಬೆಳ್ಳಾರೆ ಇದರ ಸ್ನಾತಕೋತ್ತರ ಸಮಾಜ ಕಾರ್ಯಕ್ರಮ ವಿಭಾಗದ ಸಹಯೋಗದಲ್ಲಿ ನಡೆಯಿತು