ಮಡ್ನೂರು ಮರ್ಕಂಜ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ, ಪ್ರತಿಭಾ ಪುರಸ್ಕಾರ ಹಾಗೂ ಸಿಸಿಟಿವಿ ಹಸ್ತಾಂತರ

0

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಮಡ್ನೂರು ಮರ್ಕಂಜ ಇಲ್ಲಿ 2024- 25 ನೇ ಸಾಲಿನ ವಾರ್ಷಿಕ ಕ್ರೀಡಾಕೂಟ, ಪ್ರತಿಭಾ ಪುರಸ್ಕಾರ ಹಾಗೂ ಸಿಸಿಟಿವಿ ಹಸ್ತಾಂತರ ಕಾರ್ಯಕ್ರಮವು ಜ.9ರಂದು ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಗೀತಾ ಹೊಸೋಳಿಕೆ ವಹಿಸಿದ್ದರು. ಕಾರ್ಯಕ್ರಮವನ್ನು ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ವಿಜಯಕುಮಾರ್ ಎ ಕೆ ದೀಪ ಪ್ರಜ್ವಲನೆಯೊಂದಿಗೆ ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯತ್ ಉಪಾಧ್ಯಧ್ಯಕ್ಷೆ ಶ್ರೀಮತಿ ಸಂಧ್ಯಾ ಸೇವಾಜೆ, ಗ್ರಾಮ ಪಂಚಾಯತ್ ಸದಸ್ಯರಾದ ಗೋವಿಂದ ಅಳವುಪಾರೆ, ಅರಂತೋಡು ಕ್ಲಸ್ಟರ್ ನ ಸಮೂಹ ಸಂಪನ್ಮೂಲ ವ್ಯಕ್ತಿಯಾದ ಶ್ರೀಮತಿ ಮಮತಾ ಕೆ ,
ನಿವೃತ್ತ ಮುಖ್ಯೋಪಾಧ್ಯಾಯರಾದ ವಾಸು ಗೌಡ ಪಾನತ್ತಿಲ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ನವೀನ್ ನಳಿಯಾರು ಉಪಸ್ಥಿತರಿದ್ದರು.

ಶಾಲಾ ವಿದ್ಯಾರ್ಥಿಗಳು ಪ್ರಾರ್ಥನೆಯನ್ನು ಮಾಡಿದರು
ಮುಖ್ಯ ಶಿಕ್ಷಕರಾದ ದೇವರಾಜ್ ಇವರು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿ, ಶಾಲಾ ವಾರ್ಷಿಕ ವರದಿಯನ್ನು ಮಂಡಿಸಿದರು.

ಇದೇ ಸಂದರ್ಭ ಹಳೆ ವಿದ್ಯಾರ್ಥಿ ಸಂಘದಿಂದ ಕೊಡಮಾಡಿದ ಸಿಸಿಟಿವಿಯ ಹಸ್ತಾಂತರ ಕಾರ್ಯಕ್ರಮವು ನೆರವೇರಿತು. ಸಹ ಶಿಕ್ಷಕರಾದ ಬೆಳ್ಯಪ್ಪ ರ ವರು ಕಾರ್ಯಕ್ರಮವನ್ನು ನಿರೂಪಿಸಿದರು. ಸಹ ಶಿಕ್ಷಕಿಯರಾದ ಶ್ರೀಮತಿ ಯಶಸ್ವಿನಿ ಮತ್ತು ಶ್ರೀಮತಿ ಜ್ಯೋತಿ ಅವರು ಬಹುಮಾನದ ಪಟ್ಟಿಯನ್ನು ವಾಚಿಸಿದರು. ಸಹ ಶಿಕ್ಷಕಿಯಾದ ಕುಮಾರಿ ಅಶ್ವಿನಿ ಮುಂಡೋಡಿ ಇವರು ವಂದನಾರ್ಪಣೆ ಯನ್ನು ಮಾಡಿದರು. ಈ ಸಂದರ್ಭದಲ್ಲಿ ಶಾಲೆಗೆ ಸಿಸಿ ಟಿವಿ ಕೊಡುಗೆ ನೀಡಿದ ಹಳೆ ವಿದ್ಯಾರ್ಥಿ ಸಂಘ, ಶಾಲೆಯಲ್ಲಿ ಶ್ರಮದಾನಕ್ಕೆ ಸಹಕರಿಸಿದ ಗಜಾನನ ಮಿತ್ರ ಮಂಡಳಿ ಬೊಮ್ಮಾರು, ಅಂಬೇಡ್ಕರ್ ರಕ್ಷಣಾ ವೇದಿಕೆಯ ಅರಂತೋಡು ಘಟಕ ಇದರ ಅಧ್ಯಕ್ಷರು ಹಾಗೂ ಸರ್ವ ಸದಸ್ಯರಿಗೆ ಗೌರವಾರ್ಪಣೆಯನ್ನು ಮಾಡಲಾಯಿತು.

ಮಧ್ಯಾಹ್ನದ ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರಾರಂಭವಾದವು. ಎಲ್ಲಾ ವಿದ್ಯಾರ್ಥಿಗಳಿಂದ ವಿವಿಧ ನೃತ್ಯಗಳು ನಾಟಕಗಳು ಇತ್ಯಾದಿ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.