ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಯುವನಿಧಿ ನೊಂದಣಿ ಶಿಬಿರ

0

ನೆಹರು ಮೆಮೋರಿಯಲ್ ಕಾಲೇಜಿನ ಉದ್ಯೋಗ ಮತ್ತು ಮಾರ್ಗದರ್ಶನ ಕೋಶ ಹಾಗೂ ಸುಳ್ಯ ತಾಲೂಕು ಗ್ಯಾರಂಟಿ ಯೋಜನೆ ಸಮಿತಿ ಮತ್ತು ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ತಾಲೂಕು ಯುವನಿಧಿ ಸಮಿತಿ ಆಶ್ರಯದಲ್ಲಿ “ಯುವನಿಧಿ ನೋಂದಣಿ ಶಿಬಿರ” ಜನವರಿ ಹತ್ತನೇ ಶುಕ್ರವಾರದಂದು ಕಾಲೇಜಿನ ದೃಶ್ಯ ಶ್ರವಣ ಸಭಾಂಗಣದಲ್ಲಿ ನಡೆಯಿತು.

ತಾಲೂಕು ಯುವನಿಧಿ ಸಮಿತಿಯ ಅಧ್ಯಕ್ಷರಾದ ಶಾಹುಲ್ ಹಮೀದ್ ಕುತ್ತಮೊಟ್ಟೆ ಅಧ್ಯಕ್ಷತೆ ವಹಿಸಿದ ಕಾರ್ಯಕ್ರಮದಲ್ಲಿ ಸುಳ್ಯ ತಾಲೂಕು ಪಂಚಾಯತ್ ಮುಖ್ಯ ಅಧಿಕಾರಿ ರಾಜಣ್ಣ, ಕೌಶಲ್ಯ ಅಭಿವೃದ್ಧಿ ಅಧಿಕಾರಿ ಮಂಜುಷ, ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ಉಮೇಶ್, ಕಾಲೇಜಿನ ಉದ್ಯೋಗ ಮತ್ತು ವ್ಯಕ್ತಿ ಮಾರ್ಗದರ್ಶನ ಕೋಶದ ಸಂಚಾಲಕಿ ಭವ್ಯ ಮನು ಪೆರುಮುಂಡ, ಕಾಲೇಜಿನ ಕಛೇರಿ ಅಧೀಕ್ಷಕಿ ನಿವೇದಿತ ಎಂ, ಯುವನಿಧಿ ಜಿಲ್ಲಾ ಸಮಿತಿ ಸದಸ್ಯರಾದ ರಂಜಿತ್ ರೈ ಮೇನಾಲ, ಸುಳ್ಯ ತಾಲೂಕು ಸಮಿತಿ ಸದಸ್ಯರಾದ ಲತೀಫ್, ಧನುಷ್ ಕುಕ್ಕೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ವಿವಿಧ ಕಾಲೇಜುಗಳಿಂದ ಸುಮಾರು ಮೂವತ್ತಕ್ಕೂ ಹೆಚ್ಚು ಪದವಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳು ಭಾಗವಹಿಸಿ ಯುವನಿಧಿಗೆ ನೋಂದಾಯಿಸಿದರು. ಕಾರ್ಯಕ್ರಮದ ಯಶಸ್ಸಿಗೆ ಕಾಲೇಜಿನ ಉಪನ್ಯಾಸಕರು, ಉಪನ್ಯಾಸಕೇತರ ವೃಂದದವರು ಮತ್ತು ವಿದ್ಯಾರ್ಥಿಗಳು ಸಹಕರಿಸಿದರು.