ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘದ ನಿರ್ದೇಶಕರಾಗಿ ಸುಳ್ಯ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಟಿ.ವಿಶ್ವನಾಥ್ ರವರು ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ.
ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷರಾದ ಡಾ.ಎಂ.ಎನ್.ರಾಜೇಂದ್ರಕುಮಾರ್ ಅವರ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಸಹಕಾರಿ ನೌಕರರ ಸಹಕಾರ ಸಂಘದ 15 ಸ್ಥಾನಗಳಿಗೂ ಅವಿರೋಧ ಆಯ್ಕೆ ನಡೆದಿದೆ. ಕೆ.ಟಿ.ವಿಶ್ವನಾಥ ರವರು ಸುಳ್ಯ ತಾಲೂಕು ಕ್ಷೇತ್ರದಿಂದ ಸಾಮಾನ್ಯ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು. ಸಹಕಾರ ಸಂಘಗಳ ಅಭಿವೃದ್ಧಿ ಅಧಿಕಾರಿ ಶಿವಲಿಂಗಯ್ಯ ಎಂ. ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ಜ.12 ರಂದು ಘೋಷಣೆ ಮಾಡಿದರು.