ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ (ರಿ )ಸುಳ್ಯ ತಾಲ್ಲೂಕು. ಜನಜಾಗೃತಿ ವೇದಿಕೆ ಸುಳ್ಯ ತಾಲೂಕು, ಪ್ರಗತಿ ಬಂದು ಸ್ವ ಸಹಾಯ ಸಂಘಗಳ ಒಕ್ಕೂಟ ಸುಳ್ಯ ವಲಯ ಇದರ ಆಶಯದಲ್ಲಿ ಸರ್ಕಾರಿ ಪ್ರೌಢಶಾಲೆ ಆಲೆಟ್ಟಿಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಮಾಡಲಾಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ಮುಖ್ಯ ಶಿಕ್ಷಕರಾದ ವಿಜಯಲಕ್ಷ್ಮಿ ಅವರು ದೀಪ ಪ್ರಜ್ವಲನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಶ್ರೀಮತಿ ಡಾ. ಅನುರಾಧ ಕುರಂಜಿ ಇವರು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದ ಉದ್ದೇಶ ಮಕ್ಕಳು ಇತ್ತೀಚಿನ ದಿನಗಳಲ್ಲಿ ವಿದ್ಯಾಭ್ಯಾಸದ ಜೊತೆಗೆ ತಮ್ಮ ಸ್ವಾಸ್ಥ್ಯವನ್ನು ಹೇಗೆ ರೂಪಿಸಿಕೊಳ್ಳಬೇಕು.
ಹಾಗೂ ಮೊಬೈಲ್ ಬಳಕೆ ಕಡಿಮೆ ಮಾಡುವುದು ಗಾಂಜಾ ಬೀಡಿ ಸಿಗರೇಟ್ ಗುಟ್ಕಾ ಇದರಿಂದ ದೂರ ಇರುವಂತೆ ಇಂತಹ ಹಲವಾರು ವಿಚಾರಗಳ ಬಗ್ಗೆ ವಿವರವಾದ ಮಾಹಿತಿಯನ್ನು ನೀಡಿದರು.
ಕಾರ್ಯಕ್ರಮದಲ್ಲಿ ಅಲೆಟ್ಟಿ ಸದಾಶಿವ ಒಕ್ಕೂಟದ ಜೊತೆ ಕಾರ್ಯದರ್ಶಿಯವರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ
ಶಾಲಾ ಮುಖ್ಯ ಶಿಕ್ಷಕರಾದ ವಿಜಯಲಕ್ಷ್ಮಿ ಮೇಡಂ ಅವರು ಇಂತಹ ಕಾರ್ಯಕ್ರಮ ನಮ್ಮ ವಿದ್ಯಾರ್ಥಿಗಳಿಗೆ ತುಂಬಾ ಅನುಕೂಲವಾಗಿದ್ದು ಸಂಪನ್ಮೂಲ ವ್ಯಕ್ತಿಗಳು ಹೇಳಿದ ಮಾಹಿತಿಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿ ಉತ್ತಮ ಪ್ರಜೆಗಳಾಗಿ ಎಂದು ಶುಭ ಹಾರೈಸಿದರು.
ಕಾರ್ಯಕ್ರಮವನ್ನು ಮೇಲ್ವಿಚಾರಕರಾದ ಜಯಶ್ರೀಯವರು ಸ್ವಾಗತಿಸಿ, ದೈಹಿಕ ಶಿಕ್ಷಕರಾದ ಭವಾನಿಯವರು ಧನ್ಯವಾದ ಮಾಡಿದರು. ಸೇವಾಪ್ರತಿನಿಧಿ ರೋಹಿಣಿಯವರು ಕಾರ್ಯಕ್ರಮದ ನಿರೂಪಣೆ ಮಾಡಿದರು.