ಜಾಲ್ಸೂರು ಗ್ರಾಮ ಪಂಚಾಯತಿಯ ಮುಂದಿನ ಅವಧಿಗೆ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಸದಸ್ಯೆ ಶ್ರೀಮತಿ ಸಾವಿತ್ರಿ ಅಡ್ಕಾರುಬೈಲು ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಜ.16ರಂದು ನಡೆದ ಅಧ್ಯಕ್ಷತೆಯ ಚುನಾವಣೆಯಲ್ಲಿ ಬೇರೆ ಯಾವುದೇ ನಾಮಪತ್ರಗಳು ಸಲ್ಲಿಕೆಯಾಗದ ಹಿನ್ನೆಲೆಯಲ್ಲಿ ಶ್ರೀಮತಿ ಸಾವಿತ್ರಿ ಅಡ್ಕಾರುಬೈಲು ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಹಿಂದುಳಿದ ವರ್ಗ ಎ ಮಹಿಳೆಗೆ ಮೀಸಲಾಗಿದ್ದ ಅಧ್ಯಕ್ಷತೆಗೆ ಈ ಹಿಂದೆ ಗ್ರಾ.ಪಂ. ಉಪಾಧ್ಯಕ್ಷೆಯಾಗಿ ಕಾರ್ಯ ನಿರ್ವಹಿಸಿದ್ದ ಶ್ರೀಮತಿ ಲೀಲಾವತಿ ವಿನೋಬನಗರ, ಶ್ರೀಮತಿ ಸಂದ್ಯಾ ವಾಗ್ಲೆ ಅವರು ಆಕಾಂಕ್ಷಿಯಾಗಿದ್ದರು. ಆದರೆ ಬಿಜೆಪಿ ಪಕ್ಷದ ಪ್ರಮುಖರ ಉಪಸ್ಥಿತಿಯಲ್ಲಿ ನಡೆದ ಮಾತುಕತೆಯಲ್ಲಿ ಶ್ರೀಮತಿ ಸಾವಿತ್ರಿ ಅಡ್ಕಾರುಬೈಲು ಅವರ ಹೆಸರನ್ನು ಅಧ್ಯಕ್ಷತೆಗೆ ಅಂತಿಮಗೊಳಿಸಲಾಗಿತ್ತು.
ಪಕ್ಷೇತರ ಸದಸ್ಯರಾಗಿ ಗೆಲುವು ಸಾಧಿಸಿದ್ದ ಶ್ರೀಮತಿ ಸಂಧ್ಯಾ ವಾಗ್ಲೆ ಅವರು ಬಿಜೆಪಿ ಅಭ್ಯರ್ಥಿ ಶ್ರೀಮತಿ ಸಾವಿತ್ರಿ ಅವರಿಗೆ ಬೆಂಬಲ ಸೂಚಿಸಿದ್ದ ಕಾರಣ ಅಧ್ಯಕ್ಷರ ಆಯ್ಕೆ ಅವಿರೋಧವಾಗಿ ನಡೆಯಿತು.
ಈ ಹಿಂದೆ ಶ್ರೀಮತಿ ತಿರುಮಲೇಶ್ವರಿ ಮರಸಂಕ ಅವರು ಅಧ್ಯಕ್ಷರಾಗಿ ತನ್ನ ಅವಧಿ ಮುಗಿದ ಹಿನ್ನೆಲೆಯಲ್ಲಿ ಕಳೆದ ಡಿಸೆಂಬರ್ ತಿಂಗಳಲ್ಲಿ ರಾಜೀನಾಮೆ ಸಲ್ಲಿಸಿದ್ದರು.
ಈ ಸಂದರ್ಭದಲ್ಲಿ ಬಿಜೆಪಿ ಪ್ರಮುಖರಾದ ನ.ಪಂ. ಮಾಜಿ ಅಧ್ಯಕ್ಷ ವಿನಯಕುಮಾರ್ ಕಂದಡ್ಕ, ಕನಕಮಜಲು ಸಹಕಾರಿ ಸಂಘದ ಅಧ್ಯಕ್ಷ ಸುಧಾಕರ ಕಾಮತ್ ವಿನೋಬನಗರ, ಬಿಜೆಪಿ ಮಹಾ ಶಕ್ತಿಕೇಂದ್ರದ ಅಧ್ಯಕ್ಷ ಹೇಮಂತ್ ಮಠ, ಸಹಕಾರಿ ಸಂಘದ ನಿರ್ದೇಶಕ ಡಾ. ಗೋಪಾಲಕೃಷ್ಣ ಭಟ್ ಕಾಟೂರು, ಗ್ರಾ.ಪಂ. ಮಾಜಿ ಅಧ್ಯಕ್ಷ ಅಶೋಕ ಅಡ್ಕಾರು, ಮಾಜಿ ಉಪಾಧ್ಯಕ್ಷ ದಿನೇಶ್ ಅಡ್ಕಾರು, ಉದಯ ವಾಗ್ಲೆ ಅಡ್ಕಾರು, ರಜತ್ ಅಡ್ಕಾರು, ರವಿರಾಜ್ ಗಬ್ಬಲಡ್ಕ, ವೆಂಕಟೇಶ ನಡುಬೆಟ್ಟು, ಗೋಪಾಲ ಅಡ್ಕಾರುಬೈಲು, ದಾಮೋದರ ಎ.ಎಸ್. ಅಡ್ಕಾರು ಗ್ರಾ.ಪಂ. ಮಾಜಿ ಅಧ್ಯಕ್ಷೆ ಹಾಗೂ ಹಾಲಿ ಸದಸ್ಯರಾದ ಶ್ರೀಮತಿ ತಿರುಮಲೇಶ್ವರಿ ಮರಸಂಕ, ಗ್ರಾ.ಪಂ. ಉಪಾಧ್ಯಕ್ಷೆ ಶ್ರೀಮತಿ ತಿರುಮಲೇಶ್ವರಿ ಅರ್ಭಡ್ಕ, ಸದಸ್ಯರುಗಳಾದ ಕೆ.ಎಂ. ಬಾಬು ಕದಿಕಡ್ಕ, ಪಿ.ಆರ್.ಸಂದೀಪ್ ಕದಿಕಡ್ಕ, ಸತೀಶ್ ಎಂ.ಎನ್. ಕೆಮನಬಳ್ಳಿ, ಶ್ರೀಮತಿ ಅಂಬಿಕಾ ಕುಕ್ಕಂದೂರು, ಶ್ರೀಮತಿ ದೀಪಾ ಅಜಕಳಮೂಲೆ, ಈಶ್ವರ ನಾಯ್ಕ ಸೋಣಂಗೇರಿ, ಶಿವಪ್ರಸಾದ್ ನೀರಬಸಿರು, ವಿಜಯ ಅಡ್ಕಾರು, ಶ್ರೀಮತಿ ಸಂದ್ಯಾ ವಾಗ್ಲೆ ಅಡ್ಕಾರು, ಅಬ್ದುಲ್ ಮಜೀದ್ ನಡುವಡ್ಕ, ಮುಜೀಬ್ ಪೈಚಾರು, ಶ್ರೀಮತಿ ಗೀತಾ ಗೋಪಿನಾಥ್ ಬೊಳುಬೈಲು, ಶ್ರೀಮತಿ ಗೀತಾ ಚಂದ್ರಹಾಸ ಅರ್ಭಡ್ಕ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.