ನಾಳೆ ಪಂಜ ಸೀಮೆಯ ದೇವಳದ: ಶ್ರೀ ರಕ್ತೇಶ್ವರಿ ದೈವದ ಪುನಃ ಪ್ರತಿಷ್ಠೆ ಮತ್ತು ನೇಮೋತ್ಸವ

0

ಇಂದು ಸಂಜೆ ವಾಸ್ತು ಹೋಮ, ವಿವಿಧ ವೈಧಿಕ ಕಾರ್ಯಕ್ರಮಗಳು

ಪಂಜ ಸೀಮೆಯ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವರ ಪರಿವಾರ ದೈವಗಳಾದ ಶ್ರೀ ರಕ್ತೇಶ್ವರಿ ದೈವದ ಪುನಃ ಪ್ರತಿಷ್ಠೆ ಮೂಲಸ್ಥಾನದಲ್ಲಿ ಕ್ಷೇತ್ರದ ತಂತ್ರಿಗಳಾದ ವೇದಮೂರ್ತಿ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಜ.17.ರಿಂದ ಜ18ರವರೆಗೆ ವೈದಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ.

ಜ.17 ರಂದು ಸಂಜೆ ಗಂಟೆ 6.30 ರಿಂದ ದೇವತಾ ಪ್ರಾರ್ಥನೆ , ಸ್ವಸ್ತಿ ಪುಣ್ಯಾಹ ವಾಚನ, ಪ್ರಾಸಾದ ಶುದ್ಧಿ, ರಕ್ಷೋಘ್ನ ಹೋಮ, ವಾಸ್ತು ಹೋಮ, ಮಹಾಪೂಜೆ,ಪ್ರಸಾದ ವಿತರಣೆ ಜರುಗಲಿದೆ.


ಜ.18ರಂದು ಬೆಳಿಗ್ಗೆ ಗಂಟೆ 7.30 ರಿಂದ ಮಹಾಗಣಪತಿ ಹೋಮ, ಕಲಶ ಪೂಜೆ, ಪೂ.9 ರಿಂದ 9.45ರ ಕುಂಭ ಲಗ್ನ ಮುಹೂರ್ತದಲ್ಲಿ ಶ್ರೀ ರಕ್ತೇಶ್ವರಿ ದೈವದ ಮೂಲ ಸಾನಿಧ್ಯದಲ್ಲಿ ಪ್ರತಿಷ್ಠಾ ಕಾರ್ಯಕ್ರಮವು ನಡೆಯಲಿದೆ. ಹಾಗೂ ಸಂಜೆ ಗಂಟೆ 6.00ಕ್ಕೆ ಬಂಡಾರ ತೆಗೆದು ಶ್ರೀ ರಕ್ತೇಶ್ವರಿ ದೈವ ದೈವದ ನೇಮೋತ್ಸವ ಜರುಗಲಿದೆ. ಎಂದು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ
ಡಾ.ದೇವಿಪ್ರಸಾದ್ ಕಾನತ್ತೂರ್, ವ್ಯವಸ್ಥಾಪನಾ ಸಮಿತಿ ಸದಸ್ಯರು
ಪ್ರಕಟಣೆಯಲ್ಲಿ ತಿಳಿಸಿದ್ದಾರೆ.