ಆಲೆಟ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆಯಲ್ಲಿ 12 ಸ್ಥಾನಗಳ ಪೈಕಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು 11 ಸ್ಥಾನಗಳಲ್ಲಿ ಗೆಲುವು ಸಾಧಿಸಿಕೊಂಡ ಹಿನ್ನೆಲೆಯಲ್ಲಿ ವಿಜಯೋತ್ಸವವನ್ನು ಸಹಕಾರಿ ಸಂಘದ ಎದುರಿನಲ್ಲಿ ಆಚರಿಸಿಕೊಂಡರು.
ಈ ಸಂದರ್ಭದಲ್ಲಿ ಶ್ರೀಪತಿ ಭಟ್ ಮಜಿಗುಂಡಿ, ಜಯಪ್ರಕಾಶ್ ಕುಂಚಡ್ಕ ,ಕರುಣಾಕರ ಹಾಸ್ಪಾರೆ, ವೀಣಾ ವಸಂತ ಆಲೆಟ್ಟಿ ಯವರು ಮತದಾರ ಬಾಂಧವರಿಗೆ ಅಭಿನಂದನೆ ಸಲ್ಲಿಸಿದರು. ಸುದರ್ಶನ ಪಾತಿಕಲ್ಲು ಕಾರ್ಯಕ್ರಮ ನಿರ್ವಹಿಸಿದರು.