ಬೆಳ್ಳಾರೆಯಿಂದ ಶ್ರೀ ಕ್ಷೇತ್ರ ತನಕ ಶ್ರೀ ದೇವರ ಪೇಟೆ ಸವಾರಿ
ಇತಿಹಾಸ ಪ್ರಸಿದ್ದ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವದ ಪ್ರಯುಕ್ತ ಜ.17 ರಂದು ರಾತ್ರಿ ಶ್ರೀ ದೇವರ ಪೇಟೆ ಸವಾರಿ ನಡೆಯಿತು.
ಮದ್ಯಾಹ್ನ ಶ್ರೀ ದೇವರಿಗೆ ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನಡೆಯಿತು. ರಾತ್ರಿ ಶ್ರೀ ದೇವರ ಬಲಿ ಹೊರಟು ಉತ್ಸವ, ವಸಂತ ಕಟ್ಟೆ ಪೂಜೆ, ಪೇಟೆ ಸವಾರಿ, ಮಹಾಪೂಜೆ, ಶ್ರೀ ಭೂತ ಬಲಿ ನಡೆಯಿತು. ಬಳಿಕ ಬೆಳ್ಳಾರೆ ಶ್ರೀ ಲಕ್ಷ್ಮೀ ವೆಂಕಟರಮಣ ದೇವಾಲಯದ ಬಳಿಯಿಂದ ಬೆಳ್ಳಾರೆ ಪೇಟೆ, ಮಾಸ್ತಿಕಟ್ಟೆ ಮೂಲಕ ಶ್ರೀ ಕ್ಷೇತ್ರದ ತನಕ ಅಲ್ಲಲ್ಲಿ ಕಟ್ಟೆಪೂಜೆ ಸ್ವೀಕರಿಸುತ್ತಾ ದೇವಾಲಯಕ್ಕೆ ಆಗಮಿಸಿತ್ತು.
ದೇವಸ್ಥಾನದ ತಂತ್ರಿ ಕೆಮ್ಮಿಂಜೆ ನಾಗೇಶ್ ತಂತ್ರಿ ಮಾರ್ಗದರ್ಶನದಲ್ಲಿ ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್ ಉಪಸ್ಥಿತಿಯಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ನೆರವೇರಿತು. ಈ ಸಂದರ್ಭದಲ್ಲಿ ಕ್ಷೇತ್ರದ ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷರುಗಳು, ಸದಸ್ಯರುಗಳು ಹಾಗೂ ಭಕ್ತರು ಉಪಸ್ಥಿತರಿದ್ದರು.