ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನಿಂತಿಕಲ್ಲು ವಲಯದ ವತಿಯಿಂದ ನಿಂತಿಕಲ್ಲು ಎಸ್.ಪಿ.ಪಿ.ಐ.ಟಿ.ಐ.ಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮವನ್ನು ಜ. 17ರಂದು ನಡೆಸಲಾಯಿತು. ಕಾರ್ಯಕ್ರಮದಲ್ಲಿ ಪಂಜ ಪಂಚಶ್ರೀ ಜೇಸೀಸ್ ನ ವಲಯ ತರಬೇತುದಾರ JMF ಸೋಮಶೇಖರ ನೇರಳ ಸ್ವಾಸ್ಥ್ಯ ಸಂಕಲ್ಪದ ಬಗ್ಗೆ ಮಾಹಿತಿ ನೀಡಿದರು. ಮಾಧಕ ವಸ್ತುಗಳ ಬಳಕೆಯಿಂದ ಆಗುವ ದುಷ್ಪರಿಣಾಮಗಳು, ವಿದ್ಯಾರ್ಥಿ ಬದುಕಿನ ಮೇಲೆ ಆಗುವ ಪರಿಣಾಮಗಳು, ಮಾನವನ ಮೌಲ್ಯಗಳ ಬಗ್ಗೆ ಉದಾಹರಣೆಗಳ ಮೂಲಕ ವಿವರಿಸಿದರು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ನಿಂತಿಕಲ್ ವಲಯದ ವಲಯಾಧ್ಯಕ್ಷರಾದ ವಿಶ್ವನಾಥಗೌಡ ಕಲ್ಲೆಂಬಿಯವರು ಮಾತನಾಡಿ ವಿದ್ಯಾರ್ಥಿ ಜೀವನದಲ್ಲಿ ಯಾವುದೇ ದುರಭ್ಯಾಸಗಳಿಗೆ ಬಲಿಯಾಗದೇ ತಂದೆ ತಾಯಿಗಳಿಗೆ ಒಳ್ಳೆಯ ಮಕ್ಕಳಾಗಿ, ಊರಿಗೆ ಉತ್ತಮ ಪ್ರಜೆಯಾಗಿ ಬಾಳಬೇಕು ಎನ್ನುತ್ತಾ ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ವತಿಯಿಂದ ನಡೆಯುವ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ನಿಂತಿಕಲ್ ವಲಯದ ವಲಯಾಧ್ಯಕ್ಷ ವಸಂತ ಗೌಡ ಮಾತನಾಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಎಸ್.ಪಿ.ಪಿ.ಐ.ಟಿ.ಐ ಮುಖ್ಯಸ್ಥರಾದ ದಯಾನಂದ ಕೆ.ಎಸ್ ಪ್ರಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿ, ವಲಯ ಮೇಲ್ವಿಚಾರಕರದ ಶ್ರೀಮತಿ ಹೇಮಲತಾ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಕಾರ್ಯಕ್ರಮದಲ್ಲಿ ಸೇವಾ ಪ್ರತಿನಿಧಿಗಳಾದ ದಿವ್ಯ ಮತ್ತು ಅರ್ಪಿತ, ಸಂಸ್ಥೆಯ ಅಧ್ಯಾಪಕ ವೃಂದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ‘ನಶೆ ಎಂಬ ನರಕ’ ಕಿರುಚಿತ್ರ ಪ್ರದರ್ಶಿಸಲಾಯಿತು.