














ಯೇನೆಕಲ್ಲು ಪ್ರಾ.ಕೃ.ಪ.ಸ.ಸಂಘದ ನೂತನ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಜ. 27ರಂದು ಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಕೆ ಜ. 15ರಿಂದ ಆರಂಭಗೊಂಡಿತ್ತು. ಜ. 16ರಂದು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು 12 ಕ್ಷೇತ್ರಗಳಿಗೆ ಮತ್ತು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು 12 ಸ್ಥಾನಗಳಿಗೆ ನಾಮಪತ್ರ ಸಲ್ಲಿಸಿದ್ದರು. ಜ. 18ರಂದು ಕಾಂಗ್ರೆಸ್ ಬೆಂಬಲಿತರಾಗಿ ಮಾಜಿ ನಿರ್ದೇಶಕರಾದ ವೆಂಕಟ್ರಮಣ ಕೇಂಬ್ರೋಳಿ ನಾಮಪತ್ರ ಸಲ್ಲಿಸಲಿದ್ದಾರೆ.
ನಾಮಪತ್ರ ಸಲ್ಲಿಕೆಗೆ ಜ. 19 ಕೊನೆಯ ದಿನವಾಗಿದೆ. ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ಸಂಖ್ಯೆ 13ಕ್ಕೆ ಏರಲಿದ್ದು, ಜ. 20ರಂದು ನಾಮಪತ್ರ ಪರಿಶೀಲನೆ ನಡೆದು, ಅದೇ ದಿನ ನಾಮಪತ್ರ ಹಿಂದಕ್ಕೆ ಪಡೆಯಲು ಕೊನೆಯ ದಿನವಾಗಿದೆ. ಜ. 23ರಂದು ಅಂತಿಮ ಕಣದಲ್ಲಿರುವ ಅಭ್ಯರ್ಥಿಗಳ ಪಟ್ಟಿ ಪ್ರಕಟಗೊಳ್ಳಲಿದೆ.









