ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಜಾತ್ರೋತ್ಸವ – ಶ್ರೀ ದೇವರ ದರ್ಶನ ಬಲಿ, ಬಟ್ಟಲು ಕಾಣಿಕೆ

0

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಜಾತ್ರೋತ್ಸವವು ಭಕ್ತಿ,ಸಂಭ್ರಮದಿಂದ ನಡೆಯಿತ್ತಿದ್ದು ಇಂದು ಶ್ರೀ ದೇವರ ಬಲಿ ಹೊರಟು ಉತ್ಸವ,ಶ್ರೀ ಉಳ್ಳಾಕುಲು ದೈವದ ಬಂಡಾರ ಆಗಮನ, ದೇವರ ದರ್ಶನ ಬಲಿ, ಬಟ್ಟಲು ಕಾಣಿಕೆ,ಪ್ರಸಾದ ವಿತರಣೆ ನಡೆಯಿತು.


ಸಾವಿರಾರು ಜನ ಭಕ್ತಾದಿಗಳು ಉಪಸ್ಥಿತರಿದ್ದು ಶ್ರೀ ದೇವರ ಪ್ರಸಾದ ಸ್ವೀಕರಿಸಿದರು.


ಬಟ್ಟಲು ಕಾಣಿಕೆ ನಡೆದ ಬಳಿಕ ಶ್ರೀ ದೇವರಿಗೆ ಮಹಾಪೂಜೆ ನಡೆಯಿತು.
ಬಳಿಕ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನಡೆಯಿತು.
ಸಾವಿರಾರು ಜನ ಭಕ್ತಾದಿಗಳು ಅನ್ನಪ್ರಸಾದ ಸ್ವೀಕರಿಸಿದರು.


ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತಾಧಿಕಾರಿ ಜಯಪ್ರಕಾಶ್ ಅಲೆಕ್ಕಾಡಿ,ವ್ಯ.ಸಮಿತಿ ಮಾಜಿ ಅಧ್ಯಕ್ಷರುಗಳು,ಸದಸ್ಯರು ಹಾಗೂ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.