ಇಂದು ಮತ್ತು ನಾಳೆ ಎಲಿಮಲೆಯಲ್ಲಿ ಅದ್ದೂರಿ ಕಾರ್ಯಕ್ರಮ

0

ಶತ ಸಂಭ್ರಮಕ್ಕೆ ಅಣಿಯಾಗಿದೆ ದೇವಚಳ್ಳ ಸರಕಾರಿ ಶಾಲೆ

ವಿದ್ಯುತ್ ದೀಪಗಳಿಂದ ಅಲಂಕಾರ
ತಳಿರು – ತೋರಣಗಳಿಂದ ಶೃಂಗಾರ

ಇಂದು ವೈಭವದ ಮೆರವಣಿಗೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ

ವಿವಿಧ ಕಾಮಾಗಾರಿಗಳ ಉದ್ಘಾಟನೆ, ಸನ್ಮಾನ, ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ, ಸಾoಸ್ಕೃತಿಕ ವೈಭವ

ಎಲಿಮಲೆ ಯಲ್ಲಿರುವ ದೇವಚಳ್ಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯು ಇಂದು ಮತ್ತು ನಾಳೆ ನಡೆಯಲಿರುವ ಶತಮಾನೋತ್ಸವ ಕಾರ್ಯಕ್ರಮಕ್ಕೆ ಸಂಪೂರ್ಣ ಸಿದ್ದಗೊಂಡಿದೆ. ಅದಕ್ಕಾಗಿ ವಿದ್ಯುತ್ ದೀಪಗಳಿಂದ ಅಲಂಕಾರಗೊಂಡು, ತಳಿರು ತೋರಣಗಳಿಂದ ಶೃಂಗಾರಗೊಂಡು ಶತ ಸಂಭ್ರಮಕ್ಕೆ ಅಣಿಯಾಗಿರುವ ಎಲಿಮಲೆ ಪರಿಸರ ಎಲ್ಲರನ್ನು ಸ್ವಾಗತಿಸುತ್ತಿದೆ.

ಇಂದು ಮತ್ತು ನಾಳೆ ಬೆಳಗ್ಗಿನಿಂದ ರಾತ್ರಿಯವರೆಗೆ ನಿರಂತರವಾಗಿ ಊಟ ಮತ್ತು ಉಪಹಾರದ ವ್ಯವಸ್ಥೆ ಇದೆ.

ಇಂದು ಬೆಳಿಗ್ಗೆ 9:30ಕ್ಕೆ ಅದ್ದೂರಿ ಮೆರವಣಿಗೆಯೊಂದಿಗೆ ಶತಮಾನೋತ್ಸವ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ. ರಾಜ್ಯ ವಿಧಾನಸಭಾಧ್ಯಕ್ಷರಾದ ಯು. ಟಿ.ಖಾದರ್ ಅವರು ಶತಮಾನೋತ್ಸವ ಕಾರ್ಯಕ್ರಮ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳನ್ನು ಉದ್ಘಾಟಿಸಲಿದ್ದಾರೆ. ಶತಮಾನೋತ್ಸವ ಸಮಾರಂಭವನ್ನು ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಉದ್ಘಾಟಿಸಲಿದ್ದಾರೆ. ಶಾಸಕಿ ಭಾಗೀರಥಿ ಮುರುಳ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್, ಸಂಸದಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಸಭಾ ಸದಸ್ಯರಾದ ಜಗ್ಗೇಶ್, ಡಾ.ಡಿ.ವೀರೇಂದ್ರ ಹೆಗ್ಗಡೆ, ಮಾಜಿ ಸಚಿವ ಎಸ್.ಅಂಗಾರ, ವಿಧಾನಸಭಾ ಸದಸ್ಯರಾದ ಎಸ್ ಎಲ್ ಭೋಜೇಗೌಡ, ಐವನ್ ಡಿಸೋಜಾ, ಮಂಜುನಾಥ ಭಂಡಾರಿ, ಧನಂಜಯ ಸರ್ಜಿ, ಕಿಶೋರ್ ಕುಮಾರ್, ಜಿಲ್ಲಾ ಗ್ಯಾರಂಟಿ ಅನುಸ್ಟಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ, ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷತೆ ಮಮತಾ ಗಟ್ಟಿ ದೇವಚಳ್ಳ ಗ್ರಾಮ ಪಂಚಾಯತ್ ಅಧ್ಯಕ್ಷ ಶೈಲೇಶ್ ಅಂಬೆಕಲ್ಲು, ನೆಲ್ಲೂರ್ ಕೆಮ್ರಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಧನಂಜಯ ಕೋಟೆಮಲೆ, ಎಒಎಲ್‌ಇ ಅಧ್ಯಕ್ಷ ಡಾ.ಕೆ.ವಿ. ಚಿದಾನಂದ, ಡಿಸಿಸಿ ಬ್ಯಾಂಕ್ ನಿರ್ದೇಶಕ ಎಸ್ಎನ್ ಮನ್ಮಥ, ತಹಸಿಲ್ದಾರ್ ಮಂಜುಳ ಎಂ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ರಾಜಣ್ಣ, ಕ್ಷೇತ್ರ ಶಿಕ್ಷಣಾಧಿಕಾರಿ ನಾಗವೇಣಿ, ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ಶೀತಲ್ ಯುಕೆ, ವೀಣಾ ಎಂ ಟಿ, ಬಾಲಕೃಷ್ಣ ಬೊಳ್ಳೂರು, ಭಾಗವಹಿಸಲಿದ್ದಾರೆ.

ಉದ್ಘಾಟನೆಯ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

ಸಂಜೆ 6.30ರಿಂದ ಸಭಾ ಮತ್ತು ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಶಾಲಾ ಎಸ್‌ಡಿಎಂಸಿ ಅಧ್ಯಕ್ಷ
ಜಯಾನಂದ ಪಟ್ಟೆ ಅಧ್ಯಕ್ಷತೆ ವಹಿಸುವರು. ವಿಶೇಷ ಆಹ್ವಾನಿತರಾಗಿ ಪದ್ಮಶ್ರೀ ಪುರಸ್ಕೃತರಾದ ಹರೇಕಳ ಹಾಜಬ್ಬ ಭಾಗವಹಿಸುವರು, ಮುಖ್ಯ ಅತಿಥಿಗಳಾಗಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ, ದೇವಚಳ್ಳ ಗ್ರಾ.ಪಂ.ಉಪಾಧ್ಯಕ್ಷೆ ಲೀಲಾವತಿ ಸೇವಾಜೆ, ನೆಲ್ಲೂರು ಕೆಮ್ರಾಜೆ ಗ್ರಾ.ಪಂ. ಉಪಾಧ್ಯಕ್ಷೆ ವಂದನಾ ಹೊಸ್ತೋಟ, ಪ್ರಮುಖರಾದ ವೆಂಕಟ್
ಮುಂಡೋಡಿ, ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷತೆ ಮಮತಾ ಗಟ್ಟಿ ದೇವಚಳ್ಳ, ಗ್ರಾಮ ಪಂಚಾಯತ್ ಅಧ್ಯಕ್ಷ ಶೈಲೇಶ್ ಅಂಬೆಕಲ್ಲು, ನೆಲ್ಲೂರ್ ಕೆಮ್ರಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಧನಂಜಯ ಕೋಟೆಮಲೆ, ಎಒಎಲ್‌ಇ ಅಧ್ಯಕ್ಷ ಡಾ.ಕೆ.ವಿ. ಚಿದಾನಂದ, ಡಿಸಿಸಿ ಬ್ಯಾಂಕ್ ನಿರ್ದೇಶಕ ಎಸ್ಎನ್ ಮನ್ಮಥ, ತಹಸಿಲ್ದಾರ್ ಮಂಜುಳ ಎಂ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ರಾಜಣ್ಣ, ಕ್ಷೇತ್ರ ಶಿಕ್ಷಣಾಧಿಕಾರಿ ನಾಗವೇಣಿ, ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ಶೀತಲ್ ಯುಕೆ, ವೀಣಾ ಎಂ ಟಿ, ಬಾಲಕೃಷ್ಣ ಬೊಳ್ಳೂರು, ಭಾಗವಹಿಸಲಿದ್ದಾರೆ.
ಉದ್ಘಾಟನೆಯ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಸಂಜೆ 6.30ರಿಂದ ಸಭಾ ಮತ್ತು ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಶಾಲಾ ಎಸ್‌ಡಿಎಂಸಿ ಅಧ್ಯಕ್ಷ
ಜಯಾನಂದ ಪಟ್ಟೆ ಅಧ್ಯಕ್ಷತೆ ವಹಿಸುವರು. ವಿಶೇಷ ಆಹ್ವಾನಿತರಾಗಿ ಪದ್ಮಶ್ರೀ ಪುರಸ್ಕೃತರಾದ ಹರೇಕಳ ಹಾಜಬ್ಬ ಭಾಗವಹಿಸುವರು, ಮುಖ್ಯ ಅತಿಥಿಗಳಾಗಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ, ದೇವಚಳ್ಳ ಗ್ರಾ.ಪಂ.ಉಪಾಧ್ಯಕ್ಷೆ ಲೀಲಾವತಿ ಸೇವಾಜೆ, ನೆಲ್ಲೂರು ಕೆಮ್ರಾಜೆ ಗ್ರಾ.ಪಂ. ಉಪಾಧ್ಯಕ್ಷೆ ವಂದನಾ ಹೊಸ್ತೋಟ, ಪ್ರಮುಖರಾದ ವೆಂಕಟ್ ವಳಲಂಬೆ, ಪಿ.ಸಿ.ಜಯರಾಮ ವಿಷ್ಣು ಭಟ್ ಮೂಲೆತೋಟ, ಮೋಹನ್ ರಾಮ್ ಸುಳ್ಳಿ, ಮಹಮ್ಮದ್ ಇಕ್ಬಾಲ್ ಎಲಿಮಲೆ, ಲೋಕೇಶ್ ಅಂಬೆಕಲ್ಲು, ಪುರುಷೋತ್ತಮ ಗೌಡ ಕೇಪಳಕಜೆ, ಧನಂಜಯ ಬಾಳೆತೋಟ, ಗದಾಧರ ಬಾಳುಗೋಡು, ಹಮೀದ್ ವೈ. ಎಂ. ಭಾಗವಹಿಸಲಿದ್ದಾರೆ. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿದೆ.

ಜ.25ರಂದು ಬೆಳಗ್ಗೆ 10ರಿಂದ ಹಳೆ ವಿದ್ಯಾರ್ಥಿಗಳ ಸ್ನೇಹಮಿಲನ ನಡೆಯಲಿದೆ. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹರಿಪ್ರಸಾದ್ ಬಿ.ವಿ ಅಧ್ಯಕ್ಷತೆ ವಹಿಸುವರು‌. ನಾರಾಯಣ ಗೌಡ ಬಾಳೆತೋಟ ಉದ್ಘಾಟಿಸುವರು. ರಾಷ್ಟ್ರಪ್ರಶಸ್ತಿ ವಿಜೇತ ಶಿಕ್ಷಕ ಕೆ.ಆರ್. ಗಂಗಾಧರ ಆಶಯ ಭಾಷಣ ಮಾಡಲಿದ್ದಾರೆ.
ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿದೆ.
ಸಂಜೆ ಏಳರಿಂದ ಶತಮಾನೋತ್ಸವದ ಸಮಾರೋಪ ಸಮಾರಂಭ ನಡೆಯಲಿದೆ. ಶತಮಾನೋತ್ಸವ ಸಮಿತಿಯ ಅಧ್ಯಕ್ಷ ಎ.ವಿ ತೀರ್ಥರಾಮ ಅಧ್ಯಕ್ಷತೆ ವಹಿಸಲಿದ್ದಾರೆ. ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಸನ್ಮಾನ ನೆರವೇರಿಸುವರು.


ವಿಶೇಷ ಆಹ್ವಾನಿತರಾಗಿ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಡಾ. ರೇಣುಕಾ ಪ್ರಸಾದ್ ಕೆ.ವಿ ಭಾಗವಹಿಸುವರು. ರಬ್ಬರ್ ಅಭಿವೃದ್ಧಿ ಮಂಡಳಿಯ ಸದಸ್ಯರಾದ ಮುಳಿಯ ಕೇಶವ ಭಟ್, ಗ್ರಾಮ ಪಂಚಾಯತ್ ಸದಸ್ಯರಾದ ಪ್ರೇಮಲತಾ ಕೇರ, ರಾಜೇಶ್ವರಿ ಮಾವಿನಕಟ್ಟೆ, ಪ್ರಮುಖರಾದ ನಿತ್ಯಾನಂದ ಮುಂಡೋಡಿ,ವೆಂಕಟ್ ದಂಬೆಕೋಡಿ, ಚಂದ್ರಶೇಖರ ತಳೂರು, ಪಿಡಿಒ ಬಿ.ಗುರುಪ್ರಸಾದ್, ಸರಕಾರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕಿ ಸಂಧ್ಯಾ ಭಾಗವಹಿಸಲಿದ್ದಾರೆ.


ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ ಜ.24ರಂದು ಮಧ್ಯಾಹ್ನ 2ರಿಂದ ವಿದುಷಿ ರೇಖಾ ರೇವತಿ ಹೊನ್ನಾಡಿ ನಿರ್ದೇಶನದಲ್ಲಿ ರಂಜನಿ ಸಂಗೀತ ಸಭಾ ಇದರ ವಿದ್ಯಾರ್ಥಿಗಳಿಂದ ಗಾನಸುಧೆ ಕಾರ್ಯಕ್ರಮ, ಸಂಜೆ 4 ರಿಂದ ಅಂಗನವಾಡಿ ಹಾಗೂ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ರಾತ್ರಿ 9.30 ರಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ದೇವಚಳ್ಳ ಹಾಗೂ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈಭವ ಜ. 25ರಂದು ಮಧ್ಯಾಹ್ನ 2 ರಿಂದ ಶಾರದಾಂಬಾ ಯಕ್ಷಗಾನ ಅಧ್ಯಯನದಿಂದ ಕಲಾಕ್ಷೇತ್ರ ಪಂಜ ಇದರ ವಿದ್ಯಾರ್ಥಿಗಳಿಂದ ಯಕ್ಷಗಾನ ‘ಶ್ರೀ ರಾಮಾಯಣ ಸಂಜೆ 5 ರಿಂದ ಹಿರಿಯ ವಿದ್ಯಾರ್ಥಿಗಳಿಂದ ಹಾಗೂ ಪೋಷಕರಿಂದ ಸಾಂಸ್ಕೃತಿಕ ವೈವಿಧ್ಯ, ರಾತ್ರಿ 10 ರಿಂದ ಜ್ಞಾನ ದೀಪ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈಭವ. ರಾತ್ರಿ 11.30ರಿಂದ ಗಯಾಪದ ಕಲಾವಿದೆರ್ ಉಬಾರ್ ಇವರಿಂದ ‘ಮುರಳಿ ಈ ಪಿರಾ ಬರೋಲಿ ನಾಟಕ ನಡೆಯಲಿದೆ.