ಸಂಸದ, ಶಾಸಕರಿಗೆ ಮಡಪ್ಪಾಡಿ ಸಹಕಾರ ಸಂಘದಿಂದ ಮನವಿ
ಸರಕಾದ “ಯಶಸ್ವಿನಿ ಸಹಕಾರಿ ಸದಸ್ಯರ ಆರೋಗ್ಯ ರಕ್ಷಣಾ ಯೋಜನೆ”ಯನ್ನು ಸಂಘದ ಮೂಲಕ ಸದಸ್ಯರಿಗೆ ಜಾರಿಗೊಳಿಸಲಾಗಿದ್ದು, ಸುಳ್ಯ ಮತ್ತು ಪುತ್ತೂರು ತಾಲೂಕು ಮಟ್ಟದಲ್ಲಿ ಯಾವುದೇ ಯಶಸ್ವಿನಿ ನೋಂದಾಯಿತ ಆಸ್ಪತ್ರೆಗಳು ಇಲ್ಲದೇ ಇರುವುದರಿಂದ ಫಲಾನುಭವಿಗಳಿಗೆ ಈ ಯೋಜನೆಯ ಪ್ರಯೋಜನ ಪಡೆಯಲು ಸದಸ್ಯರು ವಂಚಿತರಾಗುತ್ತಿದ್ದಾರೆ.
ಆದುದರಿಂದ ಸುಳ್ಯ ತಾಲೂಕಿನಲ್ಲಿ ಕೆ.ವಿ.ಜಿ ವೈದ್ಯಕೀಯ ಆಸ್ಪತ್ರೆ ಮತ್ತು ಪುತ್ತೂರು ತಾಲೂಕಿನ ಆಸ್ಪತ್ರೆಗಳಲ್ಲಿ ಹಾಗೂ ಜಿಲ್ಲಾ ಕೇಂದ್ರ ನಗರವಾಗಿರುವ ಮಂಗಳೂರಿನ ಪ್ರಮುಖ ಹಾಗೂ ಅತ್ಯಾಧುನಿಕ ಸೌಲಭ್ಯ ಹೊಂದಿರುವ ಆಸ್ಪತ್ರೆಗಳನ್ನು “ಯಶಸ್ವಿನಿ ಸಹಕಾರಿ ಸದಸ್ಯರ ಆರೋಗ್ಯ ರಕ್ಷಣಾ ಯೋಜನೆ”ಯಡಿ ಚಿಕಿತ್ಸೆ ಪಡೆಯಲು ಅವಕಾಶ ಕಲ್ಪಿಸಿ ಸಂಘದ ರೈತ ಸದಸ್ಯರಿಗೆ ಅನುಕೂಲ ಮಾಡಿಕೊಡಬೇಕಾಗಿ ಮಡಪ್ಪಾಡಿ ಸಹಕಾರ ಸಂಘದ ಅಧ್ಯಕ್ಷ ವಿನಯ ಮುಳುಗಾಡು ನೇತೃತ್ವದಲ್ಲಿ ನಿರ್ದೇಶಕರು, ಸಂಸದ ಕ್ಯಾ.ಬ್ರಿಜೇಶ್ ಚೌಟ ಹಾಗೂ ಶಾಸಕಿ ಭಾಗೀರಥಿ ಮುರುಳ್ಯ ರಿಗೆ ಮನವಿ ಸಲ್ಲಿಸಿದ್ದಾರೆ