ಮಾರುತಿ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ಗೂನಡ್ಕದಲ್ಲಿ 76ನೆಯ ವರ್ಷದ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.
ಸಂಸ್ಥೆಯ ಅಧ್ಯಕ್ಷರಾದ ರುಕ್ಮಯ್ಯ ದಾಸ್ ಅವರು ಧ್ವಜಾರೋಹಣವನ್ನು ನೆರವೇರಿಸಿದರು. ಮತ್ತು ಶಾಲೆಯ ಪ್ರಾಂಶುಪಾಲರಾದ ಶೋಭಾ ಕಿಶೋರ್ ರವರು ದೇಶದ ಮೌಲ್ಯವನ್ನು ಕಾಪಾಡುವಲ್ಲಿ ವಿದ್ಯಾರ್ಥಿಗಳು ಶ್ರಮವಹಿಸಬೇಕೆಂದು ತಿಳಿಸಿದರು.
ಪ್ರಾಥಮಿಕ ಮತ್ತು ಪ್ರೌಢಶಾಲೆಯ ವಿದ್ಯಾರ್ಥಿಗಳು ದೇಶಭಕ್ತಿಗೀತೆ ಹಾಗೂ ಏಳನೇ ತರಗತಿ ವಿದ್ಯಾರ್ಥಿ ಮೌರ್ಯ ಪಿ ಪಾನತ್ತಿಲ ಭಾಷಣದ ಮೂಲಕ ಗಣರಾಜ್ಯೋತ್ಸವ ಮಹತ್ವವನ್ನು ತಿಳಿಸಿದನು. ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷರಾದ ರುಕ್ಮಯ್ಯದಾಸ್, ಲೀಲಾವತಿ ರುಕ್ಮಯ್ಯದಾಸ್, ಶಾಲಾ ಪ್ರಾಂಶುಪಾಲರಾದ ಶೋಭಾ ಕಿಶೋರ್ ಶಿಕ್ಷಕರಕ್ಷಕ ಸಂಘದ ಸದಸ್ಯರು, ಪೋಷಕರು, ವಿದ್ಯಾರ್ಥಿಗಳು ಮತ್ತು ಶಿಕ್ಷಕ ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು 7ನೇ ತರಗತಿ ವಿದ್ಯಾರ್ಥಿ ಎ ಎ ಧನುಷ್ ನಿರೂಪಿಸಿ ವಂದಿಸಿದರು.