ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಗಣರಾಜ್ಯೋತ್ಸವ

0

ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ನಡೆದ 76ನೇ ಗಣರಾಜ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮವನ್ನು ಸಂಘದ ಅಧ್ಯಕ್ಷರಾದ ನಾಗೇಶ್ ಕುಂದಲ್ಪಾಡಿಯವರು ನೆರವೇರಿಸಿ ದಿನದ ಮಹತ್ವದ ಬಗ್ಗೆ ಮಾತನಾಡಿದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಅಶೋಕ ಪಿ.ಎಂ ಹಾಗು ಆಡಳಿತ ಮಂಡಳಿಯ ನಿರ್ದೇಶಕರುಗಳು ಸಂಸ್ಥೆಯ ಸದಸ್ಯರು, ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯವರು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.